Sunday, September 13, 2026
Menu

ಸಂಡೂರಿನಲ್ಲಿ ಕೌಶಲ್ಯ ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ

ನೂತನ ಕೌಶಲ್ಯ ವಿಶ್ವವಿದ್ಯಾಲಯವನ್ನು ಸಂಡೂರಿನಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ  ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಬೆಂಗಳೂರು ಕೌಶಲ್ಯ ಶೃಂಗಸಭೆ” ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ಇಂದು ಒಂದು ವಿಶಿಷ್ಟ ಜನಸಂಖ್ಯೆಯ ಹೊರಳು ಹಾದಿಯಲ್ಲಿದೆ.ನಮ್ಮ ಜನಸಂಖ್ಯೆಯ ಶೇ. 60 ಕ್ಕಿಂತ ಹೆಚ್ಚು ಜನರು 35 ವಯೋಮಾನದೊಳಗಿದ್ದಾರೆ. ಮುಂದಿನ ದಶಕದಲ್ಲಿ ಸುಮಾರು 1.2 ಕೋಟಿ ಯುವಕರು ಕಾರ್ಯಪಡೆಯನ್ನು ಪ್ರವೇಶಿಸುತ್ತಾರೆ. ಈ ಯುವಪೀಳಿಗೆಯನ್ನು ಸರಿಯಾದ ಕೌಶಲ್ಯ, ಮನಸ್ಥಿತಿ