Menu

ಹೊನ್ನಾವರದಲ್ಲಿ  ಗರ್ಭ ಧರಿಸಿದ್ದ ಹಸು ಕಡಿದ ದುಷ್ಕರ್ಮಿಗಳು: ಸರ್ಕಾರದ ವಿರುದ್ಧ ಆರ್‌. ಅಶೋಕ್‌ ವಾಗ್ದಾಳಿ

ಚಾಮರಾಜಪೇಟೆಯಲ್ಲಿ ಗೋವಿನ ಕೆಚ್ಚಲು ಕತ್ತರಿಸಿದ ಅಮಾನುಷ ಘಟನೆಯ ಆಘಾತದಿಂದ ಹೊರಬರುವ ಮುನ್ನವೇ ಈಗ ಮತ್ತೊಂದು ಹೇಯ ಕೃತ್ಯ ನಡೆದಿದ್ದು, ಹೊನ್ನಾವರದ ಸಾಲ್ಕೋಡ ಗ್ರಾಮದಲ್ಲಿ ಗಬ್ಬದ ಆಕಳು ಕಡಿದು ಕರು ತೆಗೆದು ಬಿಸಾಡಿ ಮಾಂಸ ಹೂತ್ತೊಯ್ಯುವ ಮೂಲಕ ಕಿಡಿಗೇಡಿಗಳು ಮತ್ತೊಮ್ಮೆ ಕ್ರೌರ್ಯ ಮೆರೆದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುಷ್ಟೀಕರಣ, ಅರಾಜಕತೆಯಿಂದ ನಿಸ್ತೇಜವಾಗಿರುವ ರಾಜ್ಯ  ಸರ್ಕಾರದ ಬಲಹೀನತೆಯನ್ನೇ ಬಂಡವಾಳವಾಗಿಸಿಕೊಂಡಿರುವ ಮತಾಂಧ ಶಕ್ತಿಗಳು, ಗೋವುಗಳ ಮೇಲೆ ಪ್ರಹಾರ ಮಾಡುವ ಮೂಲಕ