Tuesday, December 09, 2025
Menu

ರಜೆಯಲ್ಲಿ ಊರಿಗೆ ಬಂದಿದ್ದ ಕೋಲಾರದ ಯೋಧ ಹೃದಯಾಘಾತಕ್ಕೆ ಬಲಿ

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಆಚಂಪಲ್ಲಿ ಗ್ರಾಮದಲ್ಲಿ ರಜೆಯ ಮೇಲೆ ಊರಿಗೆ ಬಂದಿದ್ದ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮುನಿ ನಾರಾಯಣ ಹೃದಯಾಘಾತದಿಂದ ಮೃತಪಟ್ಟವರು. ಮುನಿ ನಾರಾಯಣ ಬರ್ಮಾ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಕಳೆದ ಎರಡು ತಿಂಗಳ ಹಿಂದೆ ರಜೆಯ ಮೇಲೆ ಊರಿಗೆ ಬಂದಿದ್ದರು. ರಾತ್ರಿ ಮಲಗಿದ್ದಾಗ ಹೃದಯಾಘಾತದಿಂದ ಅಸು ನೀಗಿದ್ದು, ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಆಚಂಪಲ್ಲಿ ಗ್ರಾಮದಲ್ಲಿ ಮುನಿ ನಾರಾಯಣ ಅಂತ್ಯಸಂಸ್ಕಾರ ನಡೆಯಲಿದೆ. ಒಂದೇ