Son-in-law kills
ಹಾಸನದಲ್ಲಿ ಪತ್ನಿಯನ್ನು ತವರಿಗೆ ಕರೆದೊಯ್ದ ಅತ್ತೆಯ ಕೊಲೆ ಮಾಡಿದ ಅಳಿಯ
ಹಾಸನ ಜಿಲ್ಲೆಯ ರಾಮನಾಥಪುರದಲ್ಲಿ ಪತ್ನಿಯನ್ನು ತವರುಮನೆಗೆ ಕರೆದುಕೊಂಡು ಹೋದ ಕಾರಣಕ್ಕೆ ಸಿಟ್ಟಿಗೆದ್ದ ಅಳಿಯನೊಬ್ಬ ಅತ್ತೆಯನ್ನು ಹತ್ಯೆ ಮಾಡಿದ್ದಾನೆ. ಫೈರೋಜಾ (58) ಕೊಲೆಯಾದ ಅತ್ತೆ. ರಸೂಲ್ ಕೊಲೆಗಾರ ಅಳಿಯ. ರಾಮನಾಥಪುರ ನಿವಾಸಿ ಫೈರೋಜಾ ತನ್ನ ಮಗಳು ಶೆಮಿನಾ ಬಾನು ಎಂಬಾಕೆಯನ್ನು ರಸೂಲ್‌ಗೆ ಮದುವೆ ಮಾಡಿ ಕೊಟ್ಟಿದ್ದರು. ವಿವಾಹವಾಗಿ 10 ವರ್ಷವಾದರೂ ದಂಪತಿಗೆ ಮಕ್ಕಳಾಗಿರಲಿಲ್ಲ. ಇದೇ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳವಾಗುತ್ತಿತ್ತು. ಪತ್ನಿಯ ಮೇಲೆ ರಸೂಲ್ ಅನುಮಾನಿಸಲು ಶುರುಮಾಡಿದ್ದ. ಇದರಿಂದ ನೊಂದಿದ್ದ ಶೆಮಿನಾ


