Menu
12

ಕುಡಿದ ಮತ್ತಲ್ಲಿ ತಾಯಿಯ ಕೊಂದು ಸುಸೈಡ್‌ ಮಾಡಿಕೊಂಡ ಮಗ

ಬೆಂಗಳೂರು ಹೊರವಲಯದ ಸೂರ್ಯಸಿಟಿ ಸಮೀಪದ ಹಳೆ ಚಂದಾಪುರದಲ್ಲಿ ತಾಯಿಯನ್ನು ಕೊಂದು ಬಳಿಕ ಮಗನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಹಾಲಕ್ಷ್ಮಿ (41) ಕೊಲೆಯಾದ ಮಹಿಳೆ. ರಮೇಶ್ (21) ತಾಯಿಯನ್ನು ಕೊಲೆ ಮಾಡಿದ ಬಳಿಕ ಆತ್ಮಹತ್ಯೆ ಮಾಡಿಕೊಂಡವ. ಚಿತ್ರದುರ್ಗ ಮೂಲದ ಚಳ್ಳಕೆರೆಯ ಈ ಕುಟುಂಬ ಕೆಲವು ವರ್ಷಗಳ ಹಿಂದೆ ಕೆಲಸ ಅರಸಿಕೊಂಡು ಬೆಂಗಳೂರಿಗೆ ಬಂದು ಕೂಲಿ ಮಾಡುತ್ತಿತ್ತು. ಮಗ ರಮೇಶ್ ದಿನ ನಿತ್ಯ ಕುಡಿದು ಬಂದು ತಾಯಿ ಜೊತೆ ಜಗಳ ಮಾಡುತ್ತಿದ್ದ.