Sophia Qureshi
ಹೋಗಿ ಕ್ಷಮೆ ಕೇಳಿ: ಸೋಫಿಯಾ ಖುರೇಷಿ ನಿಂದಿಸಿದ ಮಧ್ಯಪ್ರದೇಶ ಸಚಿವನಿಗೆ ಸುಪ್ರೀಂ ಚಾಟಿ
ನವದೆಹಲಿ: ನಿಮಗೆ ಕಾಮನ್ ಸೆನ್ಸ್ ಇಲ್ಲವಾ? ಏನು ಮಾತನಾಡುತ್ತಿದ್ದೀರಿ ಎಂಬ ಸೂಕ್ಷ್ಮತೆ ಅರಿವಿದೆಯಾ? ಹೋಗಿ ಹೈಕೋರ್ಟ್ ನಲ್ಲಿ ಕ್ಷಮೆ ಕೇಳಿ ಎಂದು ಮಧ್ಯಪ್ರದೇಶದ ಬಿಜೆಪಿ ಸಚಿವ ವಿಜಯ್ ಶಾಗೆ ಸುಪ್ರೀಂಕೋರ್ಟ್ ಚಾಟಿ ಬೀಸಿದೆ. ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಸಚಿವ ವಿಜಯ್ ಶಾ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಮಧ್ಯಪ್ರದೇಶ ಹೈಕೋರ್ಟ್ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ವಿಜಯ್ ಶಾ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.


