South India Urban Development
ಅ.30ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತದ ನಗರಾಭಿವೃದ್ಧಿ ಸಚಿವರ ಸಭೆ: ಡಿಸಿಎಂ
“ಇದೇ 30ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತದ ಎಲ್ಲ ರಾಜ್ಯಗಳ ನಗರಾಭಿವೃದ್ಧಿ ಜವಾಬ್ದಾರಿ ಹೊಂದಿರುವ ಸಚಿವರುಗಳ ಸಮ್ಮೇಳನವನ್ನು ನಡೆಸಲು ಕೇಂದ್ರ ಇಂಧನ, ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಮನೋಹರ ಲಾಲ್ ಖಟ್ಟರ್ ಒಪ್ಪಿದ್ದಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಹಾಗೂ ಬನ್ನೇರುಘಟ್ಟ ರಸ್ತೆಯಲ್ಲಿ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಬೆಂಗಳೂರಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಅನುದಾನಕ್ಕೆ ಒತ್ತಡ ಹಾಕುತ್ತೀರಾ ಎಂದು ಕೇಳಿದಾಗ, “ಖಂಡಿತವಾಗಿ ಕೇಳುತ್ತೇವೆ. ಕೇಂದ್ರದ ನಗರಾಭಿವೃದ್ಧಿ


