Thursday, September 18, 2025
Menu

ಮಾನವರಹಿತ ಗಗನಯಾನ ಮಿಷನ್‌ನ ಕ್ರ್ಯೂ ಮಾಡ್ಯೂಲ್‌ ಬಾಹ್ಯಾಕಾಶ ಕೇಂದ್ರಕ್ಕೆ ರವಾನೆ

ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಮಾನವರಹಿತ ಗಗನಯಾನ ಮಿಷನ್‌ನ ಕ್ರ್ಯೂ (ಸಿಬ್ಬಂದಿ) ಮಾಡ್ಯೂಲ್‌ ಅನ್ನು ಬೆಂಗಳೂರು ಎಲ್‌ಪಿಎಸ್‌ನಿಂದ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರಕ್ಕೆ ರವಾನಿಸಲಾಗಿದೆ. ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಇಸ್ರೋ, ಲಿಕ್ವಿಡ್‌ ಪ್ರೊಪಲ್ಷನ್ ಸಿಸ್ಟಮ್‌ ಏಕೀಕರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ, ಮೊದಲ ಸಿಬ್ಬಂದಿರಹಿತ ಗಗನಯಾನ ಯೋಜನೆಯ ಭಾಗವಾಗಿ ಇದನ್ನು ಕಳಿಸಲಾಗಿದೆ ಎಂದು ಮಾಹಿತಿ ನೀಡಿದೆ. ವಿಕ್ರಂ ಸಾರಾಭಾಯಿ ಬಾಹ್ಯಾಕಾಶ ಕೇಂದ್ರದಲ್ಲಿ ವಿನ್ಯಾಸಗೊಳಿಸಲಾದ ಕ್ರ್ಯೂ ಮಾಡ್ಯೂಲ್‌ ಎಂತಹ ಪರಿಸ್ಥಿತಿಯಲ್ಲೂ ನೇರವಾಗಿ, ಸ್ಥಿರವಾಗಿರುವಂತೆ