Special package
ಮಳೆಯಿಂದ ಭಾರಿ ಹಾನಿ ವಿಶೇಷ ಪ್ಯಾಕೇಜ್ಗಾಗಿ ಸಿಎಂ ಸಿದ್ದರಾಮಯ್ಯಗೆ ಈಶ್ವರ ಖಂಡ್ರೆ ಮನವಿ
ಬೀದರ್ನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರಿ ಪ್ರಮಾಣದ ಬೆಳೆ, ಮನೆ ಹಾನಿಯ ಜೊತೆಗೆ ಮೂಲಸೌಕರ್ಯಕ್ಕೂ ಹಾನಿ ಆಗಿದ್ದು, ವೈಮಾನಿಕ ಸಮೀಕ್ಷೆ ನಡೆಸಿ ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳಿಗೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ. ಭಾನುವಾರ ರಾತ್ರಿ ಸಚಿವ ರಹೀಂಖಾನ್ ಜೊತೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಅರ್ಪಿಸಿದ ಬಳಿಕ ಮಾತನಾಡಿದ ಈಶ್ವರ ಖಂಡ್ರೆ, ತಮ್ಮ ಮನವಿಗೆ ಮುಖ್ಯಮಂತ್ರಿಗಳು


