speech and hearing problem
ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಶ್ರವಣ ಸಮಸ್ಯೆ ಪತ್ತೆ ನಿಜಕ್ಕೂ ದೊಡ್ಡ ಸಾಧನೆ: ಸಿಎಂ
ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ. ಇದಕ್ಕಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನೀಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ (ಆಯಿಷ್) ಮೈಸೂರು ವತಿಯಿಂದ ಆಯೋಜಿಸಿದ್ದ ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯ “ವಜ್ರ ಮಹೋತ್ಸವ ಕಾರ್ಯಕ್ರಮ”ದಲ್ಲಿ ಮಾತನಾಡಿದರು. ಈ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮತ್ತು ಪ್ರಗತಿ ಕಾಣಬೇಕಾಗಿದೆ. ಇದಕ್ಕಾಗಿ ನಮ್ಮ ಸರ್ಕಾರ ಈಗಾಗಲೇ


