Menu

ನಮ್ಮ ಮನೆ ಕಾಪಾಡುವ ಮಠಗಳನ್ನು ಕಾಪಾಡಿಕೊಳ್ಳಬೇಕು: ಡಿಸಿಎಂ ಡಿಕೆ ಶಿವಕುಮಾರ್

ಶೃಂಗೇರಿ: ನಾವು ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ, ನಮ್ಮ ಮಠಗಳನ್ನು ಕಾಪಡಿಕೊಳ್ಳಬೇಕು. ಧರ್ಮ ಕಾಪಾಡುವ ಮಠಕ್ಕೆ ನಮ್ಮ ಕೈಲಾದ ನೆರವು ನೀಡಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿಗಳು ಸನ್ಯಾಸ ಸ್ವೀಕಾರ ಮಾಡಿ 50 ವರ್ಷಗಳು ಪೂರೈಸಿರುವ ಶುಭ ಸಂವತ್ಸರದ ಸಂದರ್ಭದಲ್ಲಿ ಶೃಂಗೇರಿಯಲ್ಲಿ ಶನಿವಾರ ಏರ್ಪಡಿಸಿದ್ದ “ಸುವರ್ಣ ಭಾರತೀ ಮಹೋತ್ಸವ” ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಭಾಗವಹಿಸಿ ಮಾತನಾಡಿದರು.

ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ಕೆಲಸ ಮಾಡುತ್ತೇನೆ: ಡಿಕೆ ಶಿವಕುಮಾರ್

ಶೃಂಗೇರಿ: ಕರ್ಮಣ್ಯೇ ವಾಧಿಕಾರಸ್ತೇ | ಮಾ ಫಲೇಷು ಕದಾಚನ ಎಂಬ ಶ್ಲೋಕದಂತೆ ನಮ್ಮ ಪ್ರಯತ್ನ ನಾವು ಮಾಡೋಣ ಫಲಾಫಲ ದೇವರಿಗೆ ಬಿಡೋಣ. ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.