Menu

ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಶೇ.33 ಅಂಕ ಪಡೆದರೂ ವಿದ್ಯಾರ್ಥಿಗಳು ಪಾಸ್!

ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಶೇ.35 ಅಂಕ ಪಡೆಯಬೇಕು ಎಂಬ ಕನಿಷ್ಠ ಅಂಕದ ಮಿತಿಯನ್ನು ರಾಜ್ಯ ಸರ್ಕಾರ ಸಡಿಲಿಸಿದೆ. ಈ ಮೂಲಕ ಸರಾಸರಿ ಅಂಕ ಪಡೆದು ಆತಂಕದಲ್ಲಿರುವ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅಂಕ ಪಡೆಯಲು ಶೇ.35 ಇದ್ದ ಮಿತಿಯಲ್ಲಿ 2 ಅಂಕ ಕಡಿಮೆ ಮಾಡಲಾಗಿದ್ದು, ಶೇ.33ರಷ್ಟು ಅಂಕ ಪಡೆದ ವಿದ್ಯಾರ್ಥಿಗಳು ಪಾಸಾಗಲಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ