Menu

ಪಿರಿಯಾಪಟ್ಟಣದಲ್ಲಿ ಹೃದಯಾಘಾತದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಸಾವು

ಹೃದಯಾಘಾತದಿಂದ ಯುವಕರು,ಯುವತಿಯರು, ಮಕ್ಕಳ ಸಾವಿನ ಸರಣಿ ಮುಂದುವರಿಯುತ್ತಿದ್ದು, ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಇಂದು (ಸೋಮವಾರ)ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ನಾಗರಾಜ್, ವಸಂತ ದಂಪತಿ ಪುತ್ರಿ ದೀಪಿಕಾ (15) ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿ. ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ದೀಪಿಕಾ ಇದ್ದಕ್ಕಿದ್ದಂತೆ ಅಸ್ವಸ್ಥಳಾಗಿದ್ದು, ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಅಸು ನೀಗಿದ್ದಾಳೆ. ಕೆಲವು ದಿನಗಳ ಹಿಂದೆ ಚಾಮರಾಜನಗರದ ಸೇಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಶಿಕ್ಷಕಿಗೆ