Menu

ಮೃತರ ಸಂಖ್ಯೆ ಮುಚ್ಚಿಡಲು ಶವ ನದಿಗೆಸೆದು ತ್ರಿವೇಣಿ ಸಂಗಮ ಮಲಿನ: ಸಂಸದೆ ಜಯಾ ಬಚ್ಚನ್‌

ಕುಂಭಮೇಳದಲ್ಲಿ  ಸಂಭವಿಸಿರುವ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ ಮುಚ್ಚಿಡಲು ಸರ್ಕಾರ, ಶವಗಳನ್ನು ನದಿಗೆ ಎಸೆದಿದೆ. ಇದರಿಂದ ತ್ರಿವೇಣಿ ಸಂಗಮ ಮಲಿನವಾಗಿದೆ ಎಂದು ಎಸ್ಪಿ ಸಂಸದೆ ಜಯಾ ಬಚ್ಚನ್‌ ಹೇಳಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿದೆ. ಕಾಲ್ತುಳಿತ ದುರಂತ ಸಂಸತ್ ಅಧಿವೇಶನದ ಉಭಯ ಸದನಗಳಲ್ಲಿ ಪ್ರತಿಧ್ವನಿಸಿದ್ದು, ಸಾವುಗಳ ಬಗ್ಗೆ ಯುಪಿ ಸರ್ಕಾರ ಅಧಿಕೃತ ಅಂಕಿ ಸಂಖ್ಯೆ ನೀಡದ್ದನ್ನೇ ಅಸ್ತ್ರ ಮಾಡಿಕೊಂಡು ವಿಪಕ್ಷಗಳು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿವೆ. ಈ ಸಾವುಗಳ ಬಗ್ಗೆ ಸಿಎಂ ಯೋಗಿ