Menu

ಒಪಿಎಸ್‌ ಅನುಷ್ಠಾನಕ್ಕೆ ಸರ್ಕಾರದಿಂದ ಅಗತ್ಯ ಕ್ರಮ: ಡಿಸಿಎಂ ಭರವಸೆ

ಓಪಿಎಸ್ (ಓಲ್ಡ್ ಪೆನ್ಷನ್ ಸ್ಕೀಮ್) ಜಾರಿ ಸಂಬಂಧ ಅಂಜುಮ್ ಪರ್ವೇಜ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಆ ಸಮಿತಿಯ ವರದಿಯನ್ನು ಪರಿಶೀಲಿಸಿ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಓಪಿಎಸ್ ಬಗ್ಗೆ ನಾವು ಭರವಸೆ ನೀಡಿದ್ದೆವು. ಅದರಂತೆ ಅದನ್ನು ಜಾರಿಗೆ ತರಲು ಬದ್ದರಾಗಿದ್ದೇವೆ. ನೀವು ಬಿಟ್ಟರೂ ಈ ವಿಚಾರವನ್ನು ನಾವು ಬಿಡುವುದಿಲ್ಲ. ಆದರೆ ಸ್ವಲ್ಪ ತಾಳ್ಮೆಯಿರಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಭರವಸೆ ನೀಡಿದ್ದಾರೆ. ಬೆಂಗಳೂರು