State Human Rights Commission
ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ದಾಖಲಾಗುವ ಪ್ರಕರಣಗಳ ಸಂಖ್ಯೆ ಹೆಚ್ಚಳ
ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ದಾಖಲಾಗುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು,ಕಳೆದೆರಡು ವರ್ಷಗಳಲ್ಲಿ 9,509 ಪ್ರಕರಣ ದಾಖಲಾಗಿದೆ. 80 ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಆಯೋಗ ಶಿಫಾರಸು ಮಾಡಿದೆ. ಮಾನವ ಹಕ್ಕುಗಳ ಬಗ್ಗೆ ಜನರಲ್ಲಿ ನಿರಂತರ ಜಾಗೃತಿ ಹಾಗೂ ತಿಳುವಳಿಕೆ ಪ್ರಯತ್ನದಿಂದ ದೂರುಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯ ಸಂಬಂಧಿಸಿದಂತೆ ಹೆಚ್ಚಿನ ದೂರುಗಳು


