stolen ticket rolls
ಬಿಎಂಟಿಸಿ ಟಿಕೆಟ್ ರೋಲ್ ಕದ್ದು ತರಕಾರಿ ಅಂಗಡಿಗೆ ಮಾರಾಟ
ಬಿಎಂಟಿಸಿ ಎಲೆಕ್ಟ್ರಿಕ್ ಬಸ್ನ ಪೇಪರ್ ಟಿಕೆಟ್ ರೋಲ್ ಹಣ್ಣು ಹಾಗೂ ತರಕಾರಿ ಅಂಗಡಿಯಲ್ಲಿ ಗ್ರಾಹಕರಿಗೆ ಬಿಲ್ ಕೊಡಲು ಬಳಕೆಯಾಗುತ್ತಿದೆ. ಯಲಹಂಕದ ಅಟ್ಟೂರು ಲೇಔಟ್ನ ಎಸ್ಆರ್ಎಸ್ ತರಕಾರಿ ಹಾಗೂ ಹಣ್ಣು ವ್ಯಾಪಾರಿ ಮಳಿಗೆಯಲ್ಲಿ ಟಿಕೆಟ್ ರೋಲ್ ಉಪಯೋಗಿಸಿ ತರಕಾರಿ ಹಾಗೂ ಹಣ್ಣಿನ ರೇಟ್ ಮುದ್ರಿಸಿ ಕೊಡಲಾಗುತ್ತಿತ್ತು. ಈ ಬಗ್ಗೆ ಸಾರ್ವಜನಿಕರು ಸೋಶಿಯಲ್ ಮೀಡಿಯಾದಲ್ಲಿ ಬಿಎಂಟಿಸಿಗೆ ಮಾಹಿತಿ ನೀಡಿದ ಬಳಿಕ ಬಿಎಂಟಿಸಿ ಅಧಿಕಾರಿಗಳು ಅಂಗಡಿಗೆ ಹೋಗಿ ಪರಿಶೀಲಿಸಿದಾಗ ಎರಡು ಟಿಕೆಟ್ ರೋಲ್ ಪತ್ತೆಯಾಗಿದೆ.