Sunday, September 14, 2025
Menu

ಬೆಂಗಳೂರು ವರ್ತುಲ ರಸ್ತೆ ಯೋಜನೆ ತ್ವರಿತ ಅನುಷ್ಠಾನದ ಭರವಸೆಯಿತ್ತ  ನಿತಿನ್ ಗಡ್ಕರಿ 

ಬೆಂಗಳೂರು ನಗರದ ವಾಹನ ದಟ್ಟಣೆ ತಗ್ಗಿಸುವ ಉಪ ನಗರ ವರ್ತುಲ ರಸ್ತೆ ಯೋಜನೆ (ಎಸ್‌ಟಿಆರ್‌ಆರ್) ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಭೂಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರೊಂದಿಗೆ ಮಾತುಕತೆ ನಡೆಸಿದರು. ನವದೆಹಲಿಯಲ್ಲಿ ಗಡ್ಕರಿ ಅವರನ್ನು ಭೇಟಿಯಾದ ಕುಮಾರಸ್ವಾಮಿ, ನೆನೆಗುದಿಗೆ ಬಿದ್ದಿದ್ದ ಈ ಯೋಜನೆಗೆ ಸಚಿವರಲ್ಲಿ ಮನವಿ ಮಾಡಿದರು. ಕುಮಾರಸ್ವಾಮಿ ಅವರ ಮನವಿಗೆ ಸ್ಪಂದಿಸಿದ ಗಡ್ಕರಿ, ಆದಷ್ಟು ಬೇಗ