Thursday, February 13, 2025
Menu

ಪರೀಕ್ಷೆ ತಪ್ಪಿಸಿಕೊಳ್ಳಲು ಶಾಲೆಗೆ ಬಾಂಬ್‍ ಬೆದರಿಕೆ: ವಿದ್ಯಾರ್ಥಿಯ ಬಂಧನ

ದೆಹಲಿಯ ಶಾಲೆಗಳಿಗೆ ಬಾಂಬ್‍ ಬೆದರಿಕೆ ಮೇಲ್‍ ಮಾಡಿದ್ದ ಕಾಲೇಜೊಂದರ 12ನೇ ತರಗತಿಯ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿದ್ಯಾರ್ಥಿಯು ತಾನು ಈ ಹಿಂದೆಯೂ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ದಕ್ಷಿಣ ಡಿಸಿಪಿ ಅಂಕಿತ್ ಚೌಹಾಣ್ ತಿಳಿಸಿದ್ದಾರೆ. ವಿದ್ಯಾರ್ಥಿಯು ಪರೀಕ್ಷೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಬಾಂಬ್‍ ಬೆದರಿಕೆಯ ಮೂಲಕ ಉದ್ವಿಗ್ನತೆ ಸೃಷ್ಟಿಸಿ ಪರೀಕ್ಷೆ ಕ್ಯಾನ್ಸಲ್‍ ಆಗುವಂತೆ ಮಾಡಬೇಕೆಂಬ ಕಾರಣಕ್ಕೆ ಈ ಕೃತ್ಯ ಎಸಗಿದ್ದಾಗಿ ಪೊಲೀಸ್‍ ವಿಚಾರಣೆಯ ವೇಳೆ ಹೇಳಿದ್ದಾನೆ. ಬುಧವಾರ ದೆಹಲಿಯ16