students death
ಕುಡಿದು ಕಾರು ಚಾಲನೆ: ಇಬ್ಬರು ಕಾಲೇಜು ವಿದ್ಯಾರ್ಥಿಗಳ ಸಾವು
ಬೆಂಗಳೂರಿನಲ್ಲಿ ಕಂಠಪೂರ್ತಿ ಕುಡಿದು ಕಾರು ಚಾಲನೆ ಮಾಡಿ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬನ್ನೇರುಘಟ್ಟ ಸಮೀಪ ರಾಗಿಹಳ್ಳಿ ಬಳಿ ನಡೆದಿದೆ. ಕೇರಳ ಮೂಲದ ಸಹಾಹುಕ್ (28) ಮತ್ತು ಅರ್ಶು (23) ಮೃತ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ. ದೇವ ನಾರಾಯಣ (23) ಮತ್ತು ಸಾಹಿಲ್ (23) ಗಂಭೀರವಾಗಿ ಗಾಯಗೊಂಡವರಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿದ್ದ ನಾಲ್ವರೂ ಗೊಟ್ಟಿಗೆರೆಯ ಕಾಲೇಜೊಂದರ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.
ಕಾರು ಚಲಾಯಿಸಿ ಅಪಘಾತಕ್ಕೆ ಬಲಿಯಾದ ಹೈಸ್ಕೂಲ್ ವಿದ್ಯಾರ್ಥಿಗಳು
ಗದಗ ತಾಲೂಕಿನ ಹುಲಕೋಟಿ ರೂರಲ್ ಇಂಜಿನಿಯರಿಂಗ್ ಕಾಲೇಜ್ ಬಳಿ ಹೈಸ್ಕೂಲ್ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಕಾರು ಅಪಘಾತವಾಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ವೇಗವಾಗಿ ಬಂದ ಕಾರು, ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಮಹಮ್ಮದ್ ಮುಜಾವರ್ (16),