Thursday, February 13, 2025
Menu

ಸಕಲೇಶಪುರದಲ್ಲಿ ಶಾಲೆಗೆಂದು ತೆರಳಿದ ಮೂವರು ವಿದ್ಯಾರ್ಥಿಗಳು ನಾಪತ್ತೆ

ಹಾಸನದ ಸಕಲೇಶಪುರ ತಾಲೂಕಿನ ಕುನಿಗನಹಳ್ಳಿ ಗ್ರಾಮದಲ್ಲಿ ಶಾಲೆಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಮೂವರು ಮಕ್ಕಳು ನಾಪತ್ತೆಯಾಗಿದ್ದಾರೆ. ಕುನಿಗನಹಳ್ಳಿ ಗ್ರಾಮದ ಧರ್ಮಪ್ರಕಾಶ್, ಮನು ಹಾಗೂ ಕಿರುಹುಣಸೆ ಗ್ರಾಮದ ಮಹೇಂದ್ರ ಎಂಬವರ ಮಕ್ಕಳಾದ ಶರತ್ (16), ಧನಂಜಯ್ (16), ಮುರುಳಿ (16) ನಾಪತ್ತೆಯಾದವರು. ಈ ಮೂವರು ವಿದ್ಯಾರ್ಥಿಗಳು ಕುನಿಗನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಆದರವಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಬುಧವಾರ ಬೆಳಿಗ್ಗೆ ಶಾಲೆಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದರು.