Monday, September 21, 2026
Menu

ರೈತರು ರಿಯಾಯಿತಿ ದರದ ಬಿತ್ತನೆ ಬೀಜ ಸದುಪಯೋಗಪಡಿಸಿಕೊಳ್ಳಿ: ಸಚಿವ ಲಾಡ್‌

2025-26 ನೇ ಸಾಲಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನ ಬಿತ್ತನೆ ಬೀಜಗಳನ್ನು ವಿತರಿಸಲು ಒಟ್ಟು 14 ರೈತ ಸಂಪರ್ಕ ಕೇಂದ್ರಗಳು ಹಾಗೂ 13 ಹೆಚ್ಚುವರಿ ಬೀಜ ವಿತರಣಾ ಕೇಂದ್ರಗಳನ್ನು ಒಳಗೊಂಡಂತೆ ಒಟ್ಟು 27 ಬೀಜ ವಿತರಣಾ ಕೇಂದ್ರಗಳನ್ನು ಗುರುತಿಸಲಾಗಿರುತ್ತದೆ ಎಂದು ಕಾರ್ಮಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್  ಹೇಳಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೃಷಿ ಇಲಾಖೆಯಿಂದ ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿಗೆ ವಿತರಿಸುವ