sugar cane farmer
ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ
ಬೆಂಗಳೂರು: 2025-26ನೇ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಹೆಚ್ಚುವರಿ ಕಬ್ಬು ಬೆಲೆ ನಿಗದಿಪಡಿಸಿ ರಾಜ್ಯ ಸರ್ಕಾರ ಶನಿವಾರ ಅಧಿಕೃತ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತ ಪ್ರತಿನಿಧಿಗಳ ಜೊತೆಗಿನ ಸಭೆಯಲ್ಲಿ ತೀರ್ಮಾನವಾದಂತೆ ಆದೇಶ ಹೊರಬಿದ್ದಿದ್ದು, ಕಬ್ಬು ಖರೀದಿ ಮಾಡಿದ ಹಣವನ್ನು 14 ದಿನದಲ್ಲಿ ರೈತರಿಗೆ ಪಾವತಿಸುವಂತೆ ಸೂಚಿಸಿದೆ. 2025-26ನೇ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು


