sun
3 ತಿಂಗಳು ಬಿರು ಬಿಸಿಲು ಸಾಮಾನ್ಯ ತಾಪಮಾನ
ಬೆಂಗಳೂರು: ಮಾರ್ಚ್- ಎಪ್ರಿಲ್ ಮೇ ಅಂತ್ಯದವರೆಗೂ ಉತ್ತರ ಕರ್ನಾಟಕದಲ್ಲಿ ತೀವ್ರ ಬಿಸಿಲು ಕಾಡುವ ಬೆನ್ನಲ್ಲೇ,ವಾಡಿಕೆಗಿಂತ ಅಧಿಕ ಮುಂಗಾರು ಮಳೆಯಿಂದಾಗಿ ದಕ್ಷಿಣ ಕರ್ನಾಟಕದಲ್ಲಿ ಸಾಮಾನ್ಯ ತಾಪಮಾನ ಇರಲಿದೆ ಎಂದು ಹವಾಮಾನ ಮುನ್ಸೂಚನೆ ಇದೆ. ಮಾರ್ಚ್ ನಿಂದ ಮೇ ತಿಂಗಳವರೆಗೆ ಕರ್ನಾಟಕದಲ್ಲಿ ತೀವ್ರ ಬಿಸಿಲು ಮತ್ತು ಇದೇ ಸಂದರ್ಭದಲ್ಲಿ ಅಧಿಕ ಮಳೆಯೂ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿದಂತೆ, ದಕ್ಷಿಣ ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಸಾಮಾನ್ಯಕ್ಕಿಂತ ಹೆಚ್ಚಾಗಿ


