sunita williams
ಸುನೀತಾ ವಿಲಿಯಮ್ಸ್ ಬಾಹ್ಯಾಕಾಶ ಸೇವೆಯಿಂದ ನಿವೃತ್ತಿ
ಗಗನಯಾತ್ರಿ ಸುನೀತಾ ವಿಲಿಯಮ್ಸ್ ವೃತ್ತಿಜೀವನದಲ್ಲಿ ಮೂರು ಪ್ರಮುಖ ಬಾಹ್ಯಾಕಾಶ ಯಾತ್ರೆಗಳನ್ನು ಪೂರ್ಣಗೊಳಿಸಿ ದಾಖಲೆ ನಿರ್ಮಿಸಿದ್ದು, 27 ವರ್ಷಗಳ ಸುದೀರ್ಘ ಸೇವೆ ಬಳಿಕ ನಾಸಾದಿಂದ ನಿವೃತ್ತರಾಗಿದ್ದಾರೆ ಎಂದು ನಾಸಾ ಅಧಿಕೃತವಾಗಿ ಘೋಷಿಸಿದೆ. ಅವರ ನಿವೃತ್ತಿ 2025ರ ಡಿಸೆಂಬರ್ 27ರಿಂದ ಜಾರಿಯಾಗುತ್ತಿದೆ ಎಂದು ನಾಸಾ ಪ್ರಕಟಣೆಯಲ್ಲಿ ತಿಳಿಸಿದೆ. 60 ವರ್ಷ ದ ಸುನೀತಾ ವಿಲಿಯಮ್ಸ್ “ಮಾನವ ಬಾಹ್ಯಾಕಾಶ ಹಾರಾಟಕ್ಕೆ ದಿಕ್ಕು ತೋರಿಸಿದ ಮಹಾನ್ ನಾಯಕಿ” ಎಂದು ನಾಸಾ ಆಡಳಿತಾಧಿಕಾರಿ ಜೇರೆಡ್ ಐಸಾಕ್‌ಮನ್ ಶ್ಲಾಘಿದ್ದಾರೆ.
ಸುನೀತಾ ವಿಲಿಯಮ್ಸ್ ಸೇರಿ ಫ್ಲೋರಿಡಾ ಸಾಗರದಲ್ಲಿ ಇಂದು ಲ್ಯಾಂಡ್ ಆದ ನಾಲ್ವರು ಗಗನಯಾತ್ರಿಗಳು
ಒಂಬತ್ತು ತಿಂಗಳು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ಇಂದು ನಸುಕಿನಲ್ಲಿ 3.27ಕ್ಕೆ ಸುರಕ್ಷಿತವಾಗಿ ಭೂಮಿಗೆ ಕರೆತರಲಾಗಿದೆ. ಸುನೀತಾ ವಿಲಿಯಮ್ಸ್, ಬುಚ್‌ವಿಲ್ಮೋರ್ ಸೇರಿ ನಾಲ್ವರು ಗಗನಯಾತ್ರಿಗಳನ್ನು ಹೊತ್ತಿದ್ದ ಸ್ಪೇಸ್ ಎಕ್ಸ್ ಕ್ರೂ ಡ್ರ್ಯಾಗನ್
ಮಾರ್ಚ್ 19ಕ್ಕೆ ಸುನೀತಾ ವಿಲಿಯಮ್ಸ್ ಭೂಮಿಗೆ ವಾಪಸ್!
ಬಾಹ್ಯಕಾಶದಲ್ಲಿ ಕೆಲವು ತಿಂಗಳಿಂದ ಸಿಲುಕಿರುವ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮಾರ್ಚ್ 19ರಂದು ಭೂಮಿಗೆ ಮರಳಲಿದ್ದಾರೆ. ಅಮೆರಿಕ ಬಾಹ್ಯಕಾಶ ಸಂಸ್ಥೆ ನಾಸಾ ಮಾರ್ಚ್ 10 ಮತ್ತು 11ರಂದು ಕ್ರ್ಯೂ-10 ಕಾರ್ಯಾಚರಣೆ ಆರಂಭಿಸಲಿದ್ದು, 8 ತಿಂಗಳಿಂದ ಅಂತಾರಾಷ್ಟ್ರೀಯ ಬಾಹ್ಯಕಾಶ ನಿಲ್ದಾಣದಲ್ಲಿ ಇರುವ ಗಗನಯಾತ್ರಿಗಳಾದ ಸುನೀತಾ



