supari
ಹಾಸನದಲ್ಲಿ ಪ್ರಿಯಕರನೊಂದಿಗೆ ಸೇರಿ ಸುಪಾರಿ ನೀಡಿ ಪತಿಯ ಕೊಲೆಗೈದ ಪತ್ನಿ
ಚನ್ನರಾಯಪಟ್ಟಣದ ಮರುವನಹಳ್ಳಿ-ಮಡಬ ರಸ್ತೆಯಲ್ಲಿ ನಡೆದಿದ್ದ ವ್ಯಕ್ತಿಯ ಕೊಲೆ ಪ್ರಕರಣದ ತನಿಖೆ ನಡೆಸಿರುವ ಪೊಲೀಸರಿಗೆ ಮಹತ್ವದ ಮಾಹಿತಿ ಲಭಿಸಿದೆ. ಪತ್ನಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವುದು ಬಯಲಾಗಿದೆ. ಮರುವನಹಳ್ಳಿ-ಮಡಬ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ನಂಜುಂಡೇಗೌಡ ಎಂಬವರ ಹತ್ಯೆಯಾಗಿತ್ತು. ಪೊಲೀಸರು ತನಿಖೆ ಆರಂಭಿಸಿದಾಗ, ಗ್ರಾಮಸ್ಥರು ನಂಜುಂಡೇಗೌಡರ ಪತ್ನಿಯ ಅಕ್ರಮ ಸಂಬಂಧದ ಬಗ್ಗೆ ಮಾಹಿತಿ ನೀಡಿದ್ದರು. ಪೊಲೀಸರು ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಹತ್ಯೆಯ ಕಾರಣ ಬಹಿರಂಗಗೊಂಡಿದೆ. 14