surgery
ಗೀತಾ ಶಿವರಾಜ್ ಕುಮಾರ್‌ಗೆ ಸರ್ಜರಿ
ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಕತ್ತಿನ ಭಾಗದಲ್ಲಿ ಶಸ್ತ್ರಚಿಕಿತ್ಸೆ ಆಗಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಕುಟುಂಬದಿಂದ ಅಧಿಕೃತ ಮಾಹಿತಿ ಇನ್ನೂ ಲಭಿಸಿಲ್ಲ. ಶಿವರಾಜ್ಕುಮಾರ್ ಅವರು ಇತ್ತೀಚೆಗಷ್ಟೇ ಕ್ಯಾನ್ಸರ್ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಗೀತಾ ಶಿವರಾಜ್ಕುಮಾರ್ ಅವರಿಗೆ ನರದ ಸಮಸ್ಯೆಯಿಂದ ಕತ್ತಿನ ಭಾಗದಲ್ಲಿ ನೋವು ಕಾಣಿಸಿಕೊಂಡಿತ್ತು. ಈ ಮೊದಲೇ ಅವರು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಿತ್ತು.
ಸರ್ಜರಿ ಮಾಡಿಸಿಕೊಳ್ಳಲಿದ್ದಾರ ನಟ ದರ್ಶನ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನ ಆರೋಪಿಯಾಗಿ ಜೈಲು ಸೇರಿದ್ದ ದರ್ಶನ್ ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲೆಂದು ಜಾಮೀನು ಪಡೆದು ಹೊರ ಬಂದು ಫಿಸಿಯೊ ಥೆರಪಿ ಪಡೆದುಕೊಂಡಿದ್ದಾರೆ. ಆದರೆ ಬೆನ್ನು ನೋವು ವಾಸಿಯಾಗುವ ಲಕ್ಷಣ ಕಾಣುತ್ತಿಲ್ಲವಾದ್ದರಿಂದ ಆಪರೇಷನ್ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ. ಸಂಕ್ರಾತಿ ವೇಳೆಗೆ