Tuesday, December 09, 2025
Menu

ಅಕ್ಟೋಬರ್ 18ರೊಳಗೆ ಸಮೀಕ್ಷೆ ಪೂರ್ಣಗೊಳಿಸಲು ಸಿಎಸ್‌ ಸೂಚನೆ

ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಅಕ್ಟೋಬರ್ 18ರೊಳಗೆ ಪೂರ್ಣಗೊಳಿಸಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೂಚನೆ ನೀಡಿದ್ದಾರೆ. ಈ ಸಂಬಂಧ ಅವರು ಅಧಿಕಾರಿಗಳಿಗೆ ಟಿಪ್ಪಣಿ ಹೊರಡಿಸಿದ್ದು, ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಸಮೀಕ್ಷೆ ಅವಧಿ ವಿಸ್ತರಣೆ ಮಾಡದಿರಲು ನಿರ್ಧಾರ ಮಾಡಿದ್ದಾರೆ. ಹೀಗಾಗಿ ನಿಗದಿತ ಅವಧಿಯೊಳಗೆ ಸಮೀಕ್ಷೆ ಪೂರೈಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಶೇ.80 ಕ್ಕಿಂತ ಕಡಿಮೆ ಇರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸಮೀಕ್ಷೆ ಶೀಘ್ರವಾಗಿ ಪೂರ್ಣಗೊಳಿಸಲು