Menu

53ನೇ ಸಿಜೆಐ ಆಗಿ ಜಸ್ಟಿಸ್‌ ಸೂರ್ಯಕಾಂತ್ ಪ್ರಮಾಣ ವಚನ

ದೇಶದ 53ನೇ ಸಿಜೆಐ ಆಗಿ ಜಸ್ಟಿಸ್‌ ಸೂರ್ಯಕಾಂತ್ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಸೂರ್ಯಕಾಂತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಕಾರ್ಯಕ್ರಮದಲ್ಲಿ ಹಾಜರಿದ್ದರು. ಪ್ರಮಾಣ ವಚನ ಸ್ವೀಕರಿಸಿದ ನಂತರ ಸಿಜೆಐ ಸೂರ್ಯಕಾಂತ್ ಅವರು ಮಾಜಿ ಸಿಜೆಐ ಬಿ.ಆರ್. ಗವಾಯಿ ಅವರನ್ನು ಆತ್ಮೀಯವಾಗಿ ಅಪ್ಪಿಕೊಂಡರು.