Suspicion on wife
ಕೋಲಾರದಲ್ಲಿ ಆಗಾಗ ತವರುಮನೆಗೆ ಹೋಗುತ್ತಿದ್ದಳೆಂದು ಪತ್ನಿಯ ಕೊಲೆಗೈದ ಪತಿ
ಕೋಲಾರದ ಜನ್ನಘಟ್ಟ ಗ್ರಾಮದಲ್ಲಿ ಆಗಾಗ ತವರು ಮನೆಗೆ ಹೋಗಿ ಬರುತ್ತಿದ್ದ ಪತ್ನಿಯ ಮೇಲೆ ಅನುಮಾನ ಪಟ್ಟ ಪತಿ ಆಕೆಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಹೆಂಡತಿಯನ್ನು ಕುತ್ತಿಗೆ ಹಿಸುಕಿ ಕೊಂದ ಗಂಡ ಸಹಜ ಸಾವೆಂದು ಬಿಂಬಿಸಲು ಹೊರಟಿದ್ದ. ಅನುಮಾನಗೊಂಡ ಮೃತಳ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಜನ್ನಘಟ್ಟ ಗ್ರಾಮದಲ್ಲಿ ಆಟೋ ಓಡಿಸಿಕೊಂಡು ಜೀವನ ಮಾಡುತ್ತಿದ್ದ ಶಿವರಾಜ್ ಹೆಂಡತಿ ಕಾವ್ಯ ಮೇಲೆ ಅನುಮಾನ ಪಟ್ಟು ಆಕೆಯೊಂದಿಗೆ ಜಗಳ ಆರಂಭಿಸಿದ್ದ.
ಪತ್ನಿಯ ಶೀಲದ ಬಗ್ಗೆ ಶಂಕೆ: ಯಾದಗಿರಿಯಲ್ಲಿ ಇಬ್ಬರು ಮಕ್ಕಳನ್ನು ಕೊಲೆಗೈದ ತಂದೆ
ಯಾದಗಿರಿ ಜಿಲ್ಲೆಯ ಹತ್ತಿಕುಣಿ ಗ್ರಾಮದಲ್ಲಿ ಪತ್ನಿಯ ಶೀಲದ ಬಗ್ಗೆ ಅನುಮಾನಗೊಂಡ ಪತಿಯೊಬ್ಬ ತನ್ನ ಮಕ್ಕಳನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಭಯಾನಕ ಕೃತ್ಯ ನಡೆದಿದೆ. ಪತಿ-ಪತ್ನಿಯ ಜಗಳದಿಂದ ಅಮಾಯಕ ಮುದ್ದು ಮಕ್ಕಳ ಪ್ರಾಣ ಬಲಿಯಾಗಿದೆ. ಮಲಗಿದ್ದ ಮಕ್ಕಳ ಮೇಲೆ ತಂದೆಯಾದವ ರಾಕ್ಷಸನಂತೆ


