Swamiji drowned
ನಾಳೆ ಇರ್ತಿನೋ ಇಲ್ವೋ… ರೀಲ್ಸ್ ಮಾಡಿದ್ದ ಸ್ವಾಮೀಜಿ ಗಂಗಾವತಿಯಲ್ಲಿ ನೀರಲ್ಲಿ ಮುಳುಗಿ ಸಾವು
ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿ ನಾಳೆ ಇರ್ತಿನೋ ಇಲ್ವೋ, ಏನ್ ಮಾಡ್ತಿನೋ ಗೊತ್ತಿಲ್ಲ ಎಂದು ರೀಲ್ಸ್ ಮಾಡಿದ್ದ ಆಂಧ್ರ ಮೂಲದ ಸ್ವಾಮೀಜಿ ಲಕ್ಷ್ಮಯ್ಯ ಮೃತಪಟ್ಟಿದ್ದಾರೆ. ಭಾನುವಾರ ರೀಲ್ಸ್ ಮಾಡಿದ್ದ ಸ್ವಾಮೀಜಿ ಸ್ನಾನ ಮಾಡಲು ಹೋದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸ್ವಾಮೀಜಿ ಮುಳುಗಿ ಚೀರಾಡುತ್ತಿದ್ದಾಗ ಸ್ಥಳೀಯರು ರಕ್ಷಣೆ ಮಾಡಿ ಆನೆಗೊಂದಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ವೈದ್ಯರು ಇರದ ಕಾರಣ ಗಂಗಾವತಿ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಕರೆದುಕೊಂಡು ಹೋಗುತ್ತಿರುವಾಗ ಡೋ


