Tuesday, December 09, 2025
Menu

ಕೂಡಲಸಂಗಮ ಪೀಠದಿಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ

ಪಂಚಮಸಾಲಿ ಸಮುದಾಯದ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿಯನ್ನು ಕೂಡಲಸಂಗಮ ಪೀಠದಿಂದ  ಉಚ್ಛಾಟಿಸಲಾಗಿದ್ದು, ಪಂಚಮಸಾಲಿ ಸಮುದಾಯದಲ್ಲಿ ಕೋಲಾಹಲ ಸೃಷ್ಟಿಯಾಗಿದೆ. ಅಖಿಲ ಭಾರತ ಲಿಂಗಾಯ ಪಂಚಮಸಾಲಿ ಸಮಾಜ ಟ್ರಸ್ಟ್ ನ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸ್ವಾಮೀಜಿಗಳ ಉಚ್ಛಾಟನೆ ನಿರ್ಧಾರ ಕೈಗೊಳ್ಳಲಾಗಿದ್ದು, ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದರು. ಸಮುದಾಯದ ಮುಖಂಡರ ಕಾರ್ಯಕಾರಿಣಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಅಕ್ರಮ ಆಸ್ತಿ ಗಳಿಕೆ, ಲಿಂಗಾಯ