Menu

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ತಲೆಮರೆಸಿಕೊಂಡಿದ್ದ ಸ್ವಯಂಘೋಷಿತ ದೇವಮಾನವ ಚೈತನ್ಯಾನಂದ ಅರೆಸ್ಟ್‌

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ ಅವರನ್ನು ಪೊಲೀಸರು ಉತ್ತರಪ್ರದೇಶದ ಆಗ್ರಾದಲ್ಲಿ ಬಂಧಿಸಿದ್ದಾರೆ. ದೆಹಲಿ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್‌ನ ನಿರ್ವಹಣಾ ಸಮಿತಿಯ ಸದಸ್ಯನಾಗಿರುವ ಆರೋಪಿ, ಪ್ರಕರಣ ಬಹಿರಂಗವಾದ ನಂತರ ತಲೆಮರೆಸಿಕೊಂಡಿದ್ದನು. ಇವನ ವಿರುದ್ಧ 2009 ಮತ್ತು 2016ರಲ್ಲಿ ಸಹ ಲೈಂಗಿಕ ಕಿರುಕುಳದ ದೂರುಗಳು ದಾಖಲಾಗಿದ್ದವು. ಸ್ವಾಮೀಜಿ ಸ್ಕಾಲರ್‌ಶಿಪ್ ಹೆಸರಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳದ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಸ್ವಾಮೀಜಿ ವಿರುದ್ಧ ಪ್ರಕರಣ

ದೆಹಲಿಯ ವಸಂತ್ ಕುಂಜ್‌ನಲ್ಲಿರುವ ಆಶ್ರಮದ ನಿರ್ದೇಶಕ, ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿಯ ವಿರುದ್ಧ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿ ಪ್ರಕರಣ ದಾಖಲಾಗಿದೆ. ಚೈತನ್ಯಾನಂದ ಸರಸ್ವತಿಯ ಬೇಡಿಕೆಗಳನ್ನು ಈಡೇರಿಸುವಂತೆ ಅಲ್ಲಿ ಅಧ್ಯಾಪಕರು/ನಿರ್ವಾಹಕರಾಗಿ ಕೆಲಸ ಮಾಡುವ ಮಹಿಳೆಯರು ಒತ್ತಡ ಹೇರಿದ್ದಾರೆ