Menu

ಫೆರಾರಿ ಮಾಲೀಕನಿಗೆ 1.58 ಕೋಟಿ ತೆರಿಗೆ ಪಾವತಿಸಲು ಸಂಜೆವರೆಗೆ ಆರ್‌ಟಿಒ ಡೆಡ್‌ಲೈನ್‌

ತೆರಿಗೆ ವಂಚಿಸಿ ಬೆಂಗಳೂರು ನಗರದಲ್ಲಿ ಓಡಾಡಿಕೊಂಡಿದ್ದ ಐಷಾರಾಮಿ ಕಾರು ಮಾಲೀಕನಿಗೆ ಆರ್‌ಟಿಒ ಅಧಿಕಾರಿಗಳು 1.58 ರೂ. ಕೋಟಿ ಬಾಕಿ ತೆರಿಗೆ ಪಾವತಿಸಲು ಇಂದು ಸಂಜೆವರೆಗೆ ಡೆಡ್‌ಲೈನ್‌ ವಿಧಿಸಿದ್ದಾರೆ. ಮಹಾರಾಷ್ಟ್ರ ರಿಜಿಸ್ಟ್ರೇಷನ್‌ ಹೊಂದಿದ ಏಳುವರೆ ಕೋಟಿ ರೂ. ಮೌಲ್ಯದ ಫೆರಾರಿ ಕಾರು ಮಾಲೀಕನೊಬ್ಬ ತೆರಿಗೆ ಪಾವತಿಸದೆ ರಾಜ್ಯದಲ್ಲಿ ಅನಧಿಕೃತವಾಗಿ ಓಡಾಟ ನಡೆಸುತ್ತಿದ್ದ. ಮಹಾರಾಷ್ಟ್ರದಲ್ಲಿ 20 ಲಕ್ಷ ರೂ. ತೆರಿಗೆ ಪಾವತಿಸಿ 2023ರ ಸೆಪ್ಟೆಂಬರ್‌ನಿಂದಲೂ ರಾಜ್ಯದಲ್ಲಿ ಅನಧಿಕೃತ ಓಡಾಟದ ಬಗ್ಗೆ ಆರ್‌ಟಿಒಗೆ ಟ್ರಾಫಿಕ್‌