Menu

ತೆರಿಗೆ ಹಾಗೂ ಸಂಪನ್ಮೂಲ ಹಂಚಿಕೆಯಲ್ಲಿ ಕೇಂದ್ರದ ದ್ರೋಹದಿಂದ ರಾಜ್ಯಕ್ಕೆ ಹಣಕಾಸಿನ ಕೊರತೆ 

​ವಿರೋಧ ಪಕ್ಷದವರು ರಾಜ್ಯದ ಹಣಕಾಸಿನ ಸ್ಥಿತಿಯ ಬಗ್ಗೆ ಮಾತನಾಡುವಾಗ ಎರಡು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಒಂದು, ತೆರಿಗೆ ಸಂಗ್ರಹಣೆ ಸಮರ್ಪಕವಾಗಿಲ್ಲ ಎಂದಾದರೆ ಇನ್ನೊಂದು ಪರೋಕ್ಷವಾಗಿ ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಹಣಕಾಸಿನ ಪರಿಸ್ಥಿತಿ ಕ್ಲಿಷ್ಟಕರವಾಗಿದೆ ಎಂದು ವ್ಯಾಖ್ಯಾನಿಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಉತ್ತರಿಸಿ, ವಾಸ್ತವ ಸಂಗತಿಗಳು ಬೇರೆಯದೆ ಆಗಿವೆ. ಕೇಂದ್ರ ಸರ್ಕಾರವು ತೆರಿಗೆ ಹಂಚಿಕೆ ಹಾಗೂ ಸಂಪನ್ಮೂಲ ಹಂಚಿಕೆೆಯಲ್ಲಿ ಮಾಡಿದ ದ್ರೋಹ