Thiruvananthapuram
ತಿರುವನಂತಪುರ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಧಾನ ಅರ್ಚಕರಾಗಿ ಶ್ರೀಸತ್ಯನಾರಾಯಣ ತೋಡ್ತಿಲ್ಲಾಯ
ಕೇರಳದ ತಿರುವನಂತಪುರ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇಗುಲ ಭಾರತದ ಅತ್ಯಂತ ಶ್ರೀಮಂತ ದೇವಸ್ಥಾನವೆಂಬ ಹೆಗ್ಗಳಿಕೆ ಹೊಂದಿದ್ದು, ಅಲ್ಲಿನ ಪೆರಿಯ ನಂಬಿ ಪಟ್ಟ ದಕ್ಷಿಣ ಕನ್ನಡ ಜಿಲ್ಲೆಯ ಅರ್ಚಕ ಬಡೆಕ್ಕರ ಶ್ರೀಸತ್ಯನಾರಾಯಣ ತೋಡ್ತಿಲ್ಲಾಯ ಯಾನೆ ನಾಗೇಶ ತೋಡ್ತಿಲ್ಲಾಯರಿಗೆ ಲಭಿಸಿದೆ. ಪೆರಿಯ ನಂಬಿ ಅಥವಾ ಮಹಾ ಪ್ರಧಾನ ಅರ್ಚಕರೆಂದರೆ ಅನಂತ ಪದ್ಮನಾಭ ಸ್ವಾಮಿ ಸಂಸ್ಥಾನದಿಂದ ನೀಡುವ ಕೊಡೆ ಮರ್ಯಾದೆ ಇರುವ ವಿಶೇಷ ಸ್ಥಾನ. ಆರು ತಿಂಗಳ ಹಿಂದೆ ಇಲ್ಲಿಗೆ ಅರ್ಚಕರಾಗಿ ನೇರವಾಗಿ