Wednesday, November 05, 2025
Menu

ಕೋಲ್ಕೊತಾ ಇಎಸ್‌ಐ ಆಸ್ಪತ್ರೆ ಕ್ವಾರ್ಟರ್ಸ್‌ನಲ್ಲಿ ಆರ್‌ಜಿ ಕರ್ ಕಾಲೇಜಿನ ಟ್ರೈನಿ ವೈದ್ಯೆಯ ಶವ ಪತ್ತೆ

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಕಮರ್ಹಟಿಯಲ್ಲಿರುವ ಇಎಸ್‌ಐ ಆಸ್ಪತ್ರೆ ಕ್ವಾರ್ಟರ್ಸ್‌ನಲ್ಲಿ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಾರೆ. ವಿದ್ಯಾರ್ಥಿನಿಯ ತಾಯಿ ತನ್ನ ಮಗಳಿಗೆ ಕರೆ ಮಾಡಿದರೂ ಉತ್ತರಿಸದ ಕಾರಣ ಭಯಭೀತರಾಗಿದ್ದರು. ಬಳಿಕ ವಿದ್ಯಾರ್ಥಿನಿ ಇವಿ ಪ್ರಸಾದ್ ತನ್ನ ಕೋಣೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿ ಬರಬೇಕಿದೆ.