tumakur
ಎತ್ತಿನಹೊಳೆ ಯೋಜನೆಯ ಬೃಹತ್ ಮೇಲ್ಗಾಲುವೆ ವೀಕ್ಷಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್
ತುಮಕೂರು (ಗುಬ್ಬಿ): ಎತ್ತಿನಹೊಳೆ ಯೋಜನೆ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಚೇಳೂರು ಬಳಿ ನಿರ್ಮಿಸಲಾಗಿರುವ ಅತ್ಯಾಧುನಿಕ ತಂತ್ರಜ್ಞಾನದ ಬೃಹತ್ ಮೇಲ್ಗಾಲುವೆ ಕಾಮಗಾರಿಯನ್ನು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಗುರುವಾರ ಪರಿವೀಕ್ಷಣೆ ಮಾಡಿದರು. ಇದು ವಿಶ್ವದಲ್ಲೇ ಅತಿ ಎತ್ತರ (40 ಮೀಟರ್) ಏಷ್ಯಾದಲ್ಲೇ ಅತಿ ಉದ್ದದ (10.47 ಕಿ. ಮೀ.) ಮೇಲ್ಗಾಲುವೆ ಇದಾಗಿದೆ. ಮಣ್ಣಿನ ಸಾಮರ್ಥ್ಯಕ್ಕೆ ತಕ್ಕಂತೆ ಓಪನ್ ಹಾಗೂ ಪೈಲ್ ವಿನ್ಯಾಸಗಳ ಮೂಲಕ ಅಡಿಪಾಯ ನಿರ್ಮಿಸಲಾಗಿದೆ. ಒಟ್ಟು
ಒಂದೇ ರಾಜ್ಯದವರಾಗಿ ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿಕೆ ಶಿವಕುಮಾರ್
ತುಮಕೂರು (ಗುಬ್ಬಿ): ನಾವು ಒಂದೇ ರಾಜ್ಯದವರು. ನೀರಿಗಾಗಿ ನಾವು ನಾವೇ ಕಿತ್ತಾಟ ನಡೆಸುವುದು ಬೇಡ. ಎಲ್ಲರಿಗೂ ಸರಿಯಾದ ರೀತಿಯಲ್ಲಿ ನೀರನ್ನು ನೀಡಲಾಗುವುದು. ನೆರೆ ರಾಜ್ಯದವರ ಜೊತೆ ತಿಕ್ಕಾಟ ನಡೆಸುವಂತೆ ನಾವು, ನಾವೇ ಕಿತ್ತಾಡುವುದು ಸರಿಯಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ತುಮಕೂರಿನಲ್ಲಿ ಯುವತಿ ಆತ್ಮಹತ್ಯೆ: ಪ್ರಿಯಕರ ಪೊಲೀಸ್ ವಶಕ್ಕೆ
ತುಮಕೂರು ಗ್ರಾಮಾಂತರ ಡಿ.ಹೊಸಹಳ್ಳಿಯಲ್ಲಿ ಸೋಮವಾರ ರಾತ್ರಿ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಕೆಯ ಪ್ರಿಯಕರನನ್ನು ವಶಕ್ಕೆ ಪಡೆದಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಚೈತನ್ಯ (22). ಆಕೆಯ ಪ್ರಿಯಕರ ವಿಜಯ್ ಕುಮಾರ್. ಈತನ ವಿರುದ್ಧ ತುಮಕೂರು ಗ್ರಾಮಾಂತರ
ಬುದ್ಧಿಮಾಂದ್ಯನ ಬಾಳಿಗೆ ಬೆಳಕಾದ ಕುಣಿಗಲ್ ಶಾಸಕ ಹೆಚ್.ಡಿ ರಂಗನಾಥ್
ಕುಣಿಗಲ್: ಸ್ವಾಧೀನವಿಲ್ಲದ ದೇಹ, ಬುದ್ಧಿಮಾಂದ್ಯ ಸ್ಥಿತಿ, ಯಾರಿಗೂ ಬೇಡವಾಗದೇ ಬೀದಿಪಾಲಾಗಿದ್ದ ವ್ಯಕ್ತಿಯ ಬಾಳಿನಲ್ಲಿ ಬೆಳಕಾಗಿ ನಿಂತಿದ್ದು ಕುಣಿಗಲ್ ತಾಲೂಕಿನ ಶಾಸಕ ಹೆಚ್.ಡಿ ರಂಗನಾಥ್. ಆಮೂಲಕ ಸ್ವಾರ್ಥ, ಅಧಿಕಾರ ದಾಹ, ಶ್ರೀಮಂತಿಕೆಯ ದರ್ಪದಿಂದ ತುಂಬಿಸುವ ಸಮಾಜದಲ್ಲಿ ಮಾನವೀಯತೆ ಇನ್ನು ಬದುಕಿದೆ ಎಂಬ ಸಂದೇಶ ಸಾರಿದ್ದಾರೆ.
ನನ್ನ ವಿರುದ್ಧ ಗಾಡ್ಕರ್ ಮಾಡಿರುವ ಆರೋಪಗಳೆಲ್ಲ ಸುಳ್ಳು: ರಾಜ್ಯಪಾಲರಿಗೆ ದಿನೇಶ್ ಅಮೀನ್ ದಾಖಲೆ ಸಹಿತ ಪತ್ರ
ನಾನು ತುಮಕೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸುಳ್ಳು ದಾಖಲೆಗಳನ್ನು ಸಲ್ಲಿಸಿ ನಿವೇಶನ ಪಡೆದಿದ್ದೇನೆ ಎನ್ನುವ ಆರೋಪ ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿದ್ದು ಮತ್ತು ನಿರಾಧಾರವಾದುದು. ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಾನು ಯಾವುದೇ ನಿವೇಶನ ಪಡೆದಿಲ್ಲ. ಕೇಂದ್ರ ಸರ್ಕಾರದ ಐಡಿಎಸ್ ಎಂಟಿ ಯೋಜನೆಯಡಿ ನಾನು ನಿವೇಶನ
ಪ್ರತಿಭಟನೆ ಬೆನ್ನಲ್ಲೇ ಹೇಮಾವತಿ ಕೆನಲ್ ಲಿಂಕ್ ಕಾಮಗಾರಿ ತಾತ್ಕಾಲಿಕ ಸ್ಥಗಿತ
ತುಮಕರು: ರೈತರು, ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆಯಲ್ಲಿ ಹೇಮಾವತಿ ಕೆನಲ್ ಲಿಂಕ್ ಕಾಮಗಾರಿಯನ್ನು ಜಿಲ್ಲಾಡಳಿತ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ವಾಪಸ್ ಪಡೆಯಲಾಗಿದೆ. ಹೇಮಾವತಿ ಕೆನಲ್ ಲಿಂಕ್ ಸಂಪರ್ಕಿಸಿ ನಡೆಸಲಾಗುತ್ತಿದ್ದ ಕಾಮಗಾರಿ ವಿರೋಧಿ ಸ್ಥಳೀಯರು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ
ತುಮಕೂರು ಹೇಮಾವತಿ ನದಿ ಕೆನಾಲ್ ಯೋಜನೆಗೆ ಸಮಸ್ಯೆಗಳಿದ್ದಲ್ಲಿ ಬಗೆಹರಿಸಲು ಸೂಚನೆ: ಸಿದ್ದರಾಮಯ್ಯ
ಬೆಂಗಳೂರು: ತುಮಕೂರಿನಲ್ಲಿ ಹೇಮಾವತಿ ನದಿ ಕೆನಾಲ್ ಯೋಜನೆಗೆ ಸಮಸ್ಯೆಗಳಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹಸಚಿವರು ಬಗೆಹರಿಸಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹೇಮಾವತಿ ನದಿ ಕೆನಾಲ್ ಯೋಜನೆಯನ್ನು ಪ್ರತಿಭಟಿಸಿ ತುಮಕೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಪತ್ರಕರ್ತರ ಪ್ರಶ್ನೆಗೆ
ಇಡಿ ಅಧಿಕಾರಿಗಳಿಂದ ಮುಂದುವರಿದ ಸಚಿವ ಪರಮೇಶ್ವರ್ ಸಂಸ್ಥೆಗಳ ದಾಖಲೆ ಪರಿಶೀಲನೆ
ಇಡಿ ಅಧಿಕಾರಿಗಳು ಯಾವುದೇ ಮಾಹಿತಿ ಕೇಳಿದರೂ ನೀಡುವಂತೆ ನಮ್ಮ ಸಿಬ್ಬಂದಿಗೆ ತಿಳಿಸಿದ್ದೇನೆ, ಇಡಿ ದೆಹಲಿಯ ಅಧಿಕಾರಿಗಳು ನಮ್ಮ ಮೂರು ಕಾಲೇಜುಗಳಿಗೆ ಭೇಟಿ ಕೊಟ್ಟಿದ್ದಾರೆ. ಅವರಿಗೆ ಏನು ಸೂಚನೆ ಬಂದಿದೆಯೋ ಗೊತ್ತಿಲ್ಲ. ಅವರು ಕೇಳಿದ ದಾಖಲೆಗಳನ್ನು ನಾವು ಕೊಡುತ್ತೇವೆ. ಸಹಕಾರ ನೀಡುತ್ತೇನೆ. ಯಾವುದನ್ನು
ಇತಿಹಾಸ ಪ್ರಸಿದ್ಧ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಮಹಾರಥೋತ್ಸವ
ತುಮಕೂರು: ಐತಿಹಾಸಿಕ ಪ್ರಸಿದ್ದ ಸಿದ್ದಗಂಗೆಯಲ್ಲಿ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಶ್ರೀಕ್ಷೇತ್ರ ಸಿದ್ದಗಂಗೆಯ ಆರಾಧ್ಯದೈವ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ರಥೋತ್ಸವಕ್ಕೆ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು
ಶ್ರೀ ಶಿವಕುಮಾರ ಸ್ವಾಮೀಜಿಯವರ 6ನೇ ಪುಣ್ಯ ಸ್ಮರಣೆ ಆಚರಣೆ
ತುಮಕೂರು- ಲೋಕಕಲ್ಯಾಣಕ್ಕಾಗಿ ದಣಿವರಿಯದೆ ತಮ್ಮ ಬದುಕನ್ನೇ ಮುಡುಪಾಗಿಟ್ಟು ಸಿದ್ದಗಂಗೆಯನ್ನು ಅಕ್ಷರಶಃ ಶಿಕ್ಷಣ ಕಾಶಿಯನ್ನಾಗಿಸಿ ವಿಶ್ವ ವಿಖ್ಯಾತಗೊಳಿಸಿದ ತ್ರಿವಿಧ ದಾಸೋಹಿ, ಕಾಯಕ ಯೋಗಿ, ನಡೆದಾಡುವ ದೇವರು ಎಂದೇ ನಾಡಿನ ಉದ್ದಗಲಕ್ಕೂ ಪ್ರಸಿದ್ದರಾಗಿದ್ದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 6ನೇ ಪುಣ್ಯ ಸ್ಮರಣೆಯನ್ನು