Tumkur
ತುಮಕೂರು ಕೆಂಪಮ್ಮ ದೇಗುಲ ಬಳಿ ವಾಮಾಚಾರ, ಬಾಗಿಲಿಗೆ ತಗುಲಿದ ಬೆಂಕಿ
ತುಮಕೂರಿನ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಹಟ್ನ ಗ್ರಾಮದ ಹೊರವಲಯದ ತೋಪಿನಲ್ಲಿ ಇರುವ ಶಕ್ತಿ ದೇವತೆ ಕೆಂಪಮ್ಮ ದೇವಿ ದೇವಾಲಯದ ಎದುರು ದುಷ್ಕರ್ಮಿಗಳು ವಾಮಾಚಾರ ಎಸಗಿರುವುದು ಪತ್ತೆಯಾಗಿದೆ. ವಾಮಾಚಾರದ ವಸ್ತುಗಳಿಗೆ ಬೆಂಕಿ ಹಚ್ಚಿದ ಪರಿಣಾಮ ಬೆಂಕಿಯು ದೇಗುಲದ ಬಾಗಿಲನ್ನು ಸಂಪೂರ್ಣ ಆವರಿಸಿ ಬಾಗಿಲು ಸುಟ್ಟು ಕರಕಲಾಗಿದೆ. ಕೆಂಪಮ್ಮ ದೇವಿ ದೇವಾಲಯದಲ್ಲಿ ಮಂಗಳವಾರ ಸಂಜೆ ಯಾರೂ ಇಲ್ಲದ್ದನ್ನು ಗಮನಿಸಿ ಪಶ್ಚಿಮದ ಬಾಗಿಲಿಗೆ ದುಷ್ಕರ್ಮಿಗಳು ವಾಮಾಚಾರ ಮಾಡಿದ್ದಾರೆ. ಬುಧವಾರ( ಇಂದು) ಬೆಳಗ್ಗೆ ಪೂಜಾ
ಚಿನ್ನಾಭರಣವಿದ್ದ ಬ್ಯಾಗ್ ಹಿಂತಿರುಗಿಸಿದ ತುಮಕೂರಿನ ಆಟೋ ಚಾಲಕ
ತುಮಕೂರು ನಗರದಲ್ಲಿ ಆಟೋ ಚಾಲಕರೊಬ್ಬರು ಚಿನ್ನಾಭರಣವಿದ್ದ ಬ್ಯಾಗ್ ಅನ್ನು ಪ್ರಯಾಣಿಕರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದು ಸುದ್ದಿಯಾಗಿದ್ದಾರೆ. ತುಮಕೂರಿನ ಹನುಮಂತಪುರ ನಿವಾಸಿ ರವಿಕುಮಾರ್ ಅವರ ಆಟೋದಲ್ಲಿ ಪ್ರಯಾಣಿಕರು 4 ಲಕ್ಷ ಬೆಲೆ ಬಾಳುವ ಒಡವೆ ಇದ್ದ ಬ್ಯಾಗ್ ಬಿಟ್ಟು ಹೋಗಿದ್ದರು. ಅರಸೀಕೆರೆ ಮೂಲದ
ತುಮಕೂರು ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ಸಾವು: ಶವವಿಟ್ಟು ಕುಟುಂಬದ ಪ್ರತಿಭಟನೆ
ತುಮಕೂರಿನ ಚಿಕ್ಕನಾಯಕನಹಳ್ಳಿ ಪಟ್ಟಣದ ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ 2 ತಿಂಗಳ ಬಾಣಂತಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಸಂಬಂಧಿಕರು ತಡರಾತ್ರಿ ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿದರು. ಕುದ್ದೂರು ಗ್ರಾಮದ ದೀಪಕ್ ಎಂಬವರ ಪತ್ನಿ ಸಿಂಧು (28) ಹೊಟ್ಟೆ ನೋವಿಗೆ ಚಿಕಿತ್ಸೆ
ಶಾಲೆಗೆ ಹೋಗಬೇಕೆಂಬ ಧಾವಂತದಲ್ಲಿ ಮನೆಗೆ ಹೊರಟಿದ್ದ ತಾಯಿ ಮಕ್ಕಳು ಅಪಘಾತಕ್ಕೆ ಬಲಿ
ತುಮಕೂರು ತಾಲೂಕಿನ ಓಬಳಾಪುರ ಗ್ರಾಮದ ಬಳಿ ಸಂಭವಿಸಿದ ಅಪಘಾತದಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮಹಮ್ಮದ್ ಆಸೀಫ್ (12), ಮಮ್ತಾಜ್ (38), ಶಾಖಿರ್ ಹುಸೇನ್ (18) ಮೃತ ದುರ್ದೈವಿಗಳು. ಮೃತರು ಮಧುಗಿರಿ ತಾಲೂಕಿನ ಗುಡ್ಡೆನಹಳ್ಳಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.