Wednesday, November 19, 2025
Menu

ಅತ್ತಿಬೆಲೆ ಕೆರೆಯಲ್ಲಿ ಮುಳುಗಿ ಬಾಲಕರಿಬ್ಬರ ಸಾವು

ಬೆಂಗಳೂರು ಹೊರವಲಯದ ಅತ್ತಿಬೆಲೆ ಸಮೀಪದ ಬಳ್ಳೂರು ಗ್ರಾಮದಲ್ಲಿ ಆಟವಾಡುತ್ತ ಕೆರೆ ಬಳಿ ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆಯೊಂದು ನಡೆದಿದೆ. ಅನಿಕೇತ್ ಕುಮಾರ್(12), ರೆಹಮಾತ್ ಬಾಬಾ(11) ಮೃತಪಟ್ಟ ಬಾಲಕರು. ಬಾಲಕ ಅನಿಕೇತ್ ಕುಮಾರ್ ಬಿಹಾರ ಮೂಲದವ, ರೆಹಮಾತ್ ಬಾಬಾ ಆಂಧ್ರ ಕದಿರಿ ಮೂಲದ ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ಪೋಷಕರ ಈ ಮಕ್ಕಳು ಸಂಜೆ ಮನೆಯ ಬಳಿಯೇ ಆಟವಾಡುತ್ತಿದ್ದರು. ಆಟವಾಡುತ್ತಾ ಕೆರೆಯ ಬಳಿ ಹೋಗಿದ್ದಾರೆ.

ದೇವನಹಳ್ಳಿಯಲ್ಲಿ ಕುಟುಂಬ ಆತ್ಮಹತ್ಯೆ ಯತ್ನ, ಇಬ್ಬರ ಸಾವು, ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರಿನ ದೇವನಹಳ್ಳಿಯ ಹೆಗ್ಗನಹಳ್ಳಿಯಲ್ಲಿ ಪೌರೋಹಿತ್ಯ ಮಾಡ್ಕೊಂಡಿದ್ದ ಕುಮಾರಪ್ಪ ಎಂಬವರ ಇಡೀ ಕುಟುಂಬ ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. 60 ವರ್ಷದ ಕುಮಾರಪ್ಪ, ಪತ್ನಿ 55 ವರ್ಷದ ರಮಾ ಮತ್ತು ಗಂಡು ಮಕ್ಕಳಾದ ಅಕ್ಷಯ್ ಹಾಗೂ ಅರುಣ್ ಸಾಮೂಹಿಕವಾಗಿ

ವಿಜಯಪುರದಿಂದ ಕುಂಭಮೇಳಕ್ಕೆ ಹೊರಟಿದ್ದ ಇಬ್ಬರು ಅಪಘಾತಕ್ಕೆ ಬಲಿ

ಕುಂಭಮೇಳದಲ್ಲಿ ಭಾಗವಹಿಸಲು ಪ್ರಯಾಗ್‌ರಾಜ್ ಗೆ ಪ್ರಯಾಣಿಸುತ್ತಿದ್ದಾಗ ಗುಜರಾತ್‌ನ ಪೋರ್‌ಬಂದರ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿಜಯಪುರದ ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ವಿಶ್ವನಾಥ ಅವಜಿ (55) ಹಾಗೂ ಮಲ್ಲಿಕಾರ್ಜುನ ಸದ್ದಲಗಿ (40) ಮೃತಪಟ್ಟವರು. ಚಡಚಣ ಪಟ್ಟಣದಿಂದ

ಕೂಲಿ ಕೆಲಸಕ್ಕೆಂದು ಬೆಂಗಳೂರಿಗೆ ಬರುತ್ತಿದ್ದವರು ರಸ್ತೆ ಅಪಘಾತಕ್ಕೆ ಬಲಿ

ಶಿರಾದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 48 ರಲ್ಲಿರುವ ಎಮ್ಮೇರಹಳ್ಳಿ ಬ್ರಿಡ್ಜ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಲಾರಿಗೆ ಡಿಕ್ಕಿ ಆಗಿದ್ದು, ಕ್ರೂಸರ್ ಚಾಲಕ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ. ರಾಯಚೂರು ಜಿಲ್ಲೆಯ ಮಾನ್ವಿ ಮೂಲದ ಚಾಲಕ