Thursday, February 06, 2025
Menu

ರಾಜ್ಯಗಳ ಹಕ್ಕುಗಳ ಮೊಟಕುಗೊಳಿಸಿದ ಯುಜಿಸಿ ಕರಡು ನಿಯಮದ ವಿರುದ್ಧ ಎಂ.ಕೆ.ಸ್ಟಾಲಿನ್ ಆಕ್ರೋಶ

ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಬಿಡುಗಡೆ ಮಾಡಿದ ಕರಡು ನಿಯಮಗಳು ಶೈಕ್ಷಣಿಕ ಸಮಗ್ರತೆ, ಸರ್ಕಾರಿ ಅನುದಾನಿತ ವಿಶ್ವವಿದ್ಯಾಲಯಗಳ ಸ್ವಾಯತ್ತತೆಗೆ ಗಂಭೀರ ಸವಾಲು ಒಡ್ಡುತ್ತಿವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆರೋಪಿಸಿದ್ದಾರೆ. ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳ ಸಿಎಂಗಳಿಗೆ ಪತ್ರ ಬರೆದಿರುವ ಸ್ಟಾಲಿನ್ ಈ ವಿಚಾರವಾಗಿ ದನಿ ಎತ್ತುವಂತೆ ಕೇಳಿಕೊಂಡಿದ್ದು, ತಮಿಳುನಾಡು ಮಾದರಿಯಲ್ಲಿ ಆಯಾ ರಾಜ್ಯ ವಿಧಾನಸಭೆಗಳಲ್ಲಿ ನಿರ್ಣಯವನ್ನು ಅಂಗೀಕರಿಸುವಂತೆ ಒತ್ತಾಯಿಸಿದ್ದಾರೆ. ಅಧಿಕಾರವನ್ನು ಕೇಂದ್ರೀಕರಿಸುವ ಮತ್ತು ನಮ್ಮ ದೇಶದ ಒಕ್ಕೂಟ ರಚನೆಯನ್ನು ದುರ್ಬಲಗೊಳಿಸುವ