Menu

ಮಗನ ಆತ್ಮಹತ್ಯೆ ಸುದ್ದಿ ಕೇಳಿದ ತಾಯಿ ಹೃದಯಾಘಾತಕ್ಕೆ ಬಲಿ

ಮಗನ ಸಾವಿನ ಸುದ್ದಿ ತಿಳಿದ ತಾಯಿ ಹೃದಯಾಘಾತದಿಂದ ಅಸು ನೀಗಿರುವ ಪ್ರಕರಣ ಗ್ವಾಲಿಯರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು  ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. 33 ವರ್ಷದ ಎಂಜಿನಿಯರಿಂಗ್ ಪದವೀಧರ ಮನೀಶ್ ನೌಕರಿ ಸಿಗಲಿಲ್ಲ ಎನ್ನುವ ಕಾರಣಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸುದ್ದಿ ತಿಳಿಯುತ್ತಿದ್ದಂತೆ ತಾಯಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಮೃತನ ಸಹೋದರ ರಾತ್ರಿ ಮದುವೆ ಸಮಾರಂಭದಲ್ಲಿದ್ದಾಗ ಕಿರಿಯ ಸಹೋದರ ವಿಷ ಸೇವಿಸಿದ ಬಗ್ಗೆ ತಂದೆಯಿಂದ ಕರೆ ಬಂದಿತ್ತು.