vice president
ಮೌಲ್ಯವರ್ಧಿತ ಆಹಾರ ಉತ್ಪನ್ನಗಳ ಹೆಚ್ಚಳದಲ್ಲಿ ಸಂಶೋಧನೆ, ಸಿಎಸ್.ಆರ್ ನಿಧಿ ಬಳಕೆ ಆಗಲಿ; ಜಗದೀಪ ಧನಕರ್
ಧಾರವಾಡ : ಆಹಾರ ಉತ್ಪನ್ನಗಳ ಉತ್ಪಾದನೆಯಲ್ಲಿ ನಾವು ಸ್ವಾವಲಂಬಿಗಳಾಗಿದ್ದು, ಮೌಲ್ಯವರ್ಧಿತ ಆಹಾರ ಉತ್ಪನ್ನಗಳ ಹೆಚ್ಚಳಕ್ಕಾಗಿ ಕೃಷಿ ಕ್ಷೇತ್ರದಲ್ಲಿ ಹೆಚ್ಚು ಸಂಶೋಧನೆಗಳಾಗಬೇಕು ಮತ್ತು ಸಿ.ಎಸ್.ಆರ್, ಐ.ಸಿ.ಎ.ಆರ್ ನಿಧಿಗಳ ಬಳಕೆಗೆ ಕೃಷಿ ಸಂಶೋಧನೆ ಕ್ಷೇತ್ರದಲ್ಲಿ ಆದ್ಯತೆ ನೀಡಬೇಕೆಂದು ಉಪರಾಷ್ಟ್ರಪತಿ ಜಗದೀಪ ಧನಕರ್ ಹೇಳಿದರು. ಅವರು ಇಂದು ಬೆಳಿಗ್ಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಮಹಾವಿದ್ಯಾಲಯ ಅಮೃತ ಮಹೋತ್ಸವ ಹಾಗೂ ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು. ಕೃಷಿ ಭಾರತದ ಆರ್ಥಿಕತೆಯ ಬೆನ್ನೆಲಬು,