vikram amte
ಶರಣಾಗುವ ನಕ್ಸಲರಿಗೆ ರಾಜ್ಯ ಸರ್ಕಾರದಿಂದ 7.50 ಲಕ್ಷ ರೂ.: ವಿಕ್ರಮ್ ಅಮ್ಟೆ
ಶರಣಾಗುವ ನಕ್ಸಲರಿಗೆ ಜೀವನ ಕಟ್ಟಿಕೊಳ್ಳಲು 7.50 ಲಕ್ಷ ರೂ. ನೆರವು ನೀಡಲಾಗುವುದು ಎಂದು ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮ್ಟೆ ಘೋಷಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಸ್ತ್ರಾಸ್ತ್ರ ಹಿಡಿದು ನಕ್ಸಲ್ ಹೋರಾಟ ಮಾಡುವವವರು ಸಮಾಜಮುಖಿ ಆಗಲು ರಾಜ್ಯ ಸರಕಾರ ಹಲವು ಯೋಜನೆಗಳನ್ನು ಪ್ರಕಟಿಸಿದೆ ಎಂದರು. ಸಮಾಜದಲ್ಲಿ ಗೌರವಯುತವಾಗಿ ಬದುಕಲು ಶರಣಾಗುವ ನಕ್ಸಲರಿಗೆ 7.50 ಲಕ್ಷ ರೂ. ನೀಡಲಾಗುವುದು. ಹೊರರಾಜ್ಯದ ನಕ್ಸಲರಿಗೆ 4 ಲಕ್ಷ ರೂ. ನೆರವು ನೀಡಲಾಗುವುದು