west bengal
ಎಸ್‌ಐಆರ್‌ನಿಂದ ಪಶ್ಚಿಮಬಂಗಾಳಕ್ಕೆ ಅನ್ಯಾಯ: ಸುಪ್ರೀಂಕೋರ್ಟ್‌ನಲ್ಲಿ ದೀದಿ ಖುದ್ದು ವಾದ
ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯಲ್ಲಿ ರಾಜ್ಯದ ನೈಜ ಮತದಾರರಿಗೆ ಅನ್ಯಾಯವಾಗಿದೆ ಎಂದು ಸಲ್ಲಿಸಿದ್ದ ಅರ್ಜಿಯ ಪರವಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂಕೋರ್ಟ್‌ನಲ್ಲಿ ತಾವೇ ವಾದ ಮಂಡಿಸಿದ್ದಾರೆ. ಹೀಗೆ ಸುಪ್ರೀಂಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸಿದ ಮೊದಲ ಮುಖ್ಯಮಂತ್ರಿ ಎಂಬ ಹೊಸ ದಾಖಲೆ ನಿರ್ಮಿಸಿದ್ದಾರೆ. ಮಮತಾ ಬ್ಯಾನರ್ಜಿ ಅವರನ್ನು ಹಿರಿಯ ನ್ಯಾಯವಾದಿ ಶ್ಯಾಮ್ ದಿವಾನ್ ಪ್ರತಿನಿಧಿಸಿದ್ದು, ಜೊತೆಗೆ ಮಮತಾ ಕೂಡ ಸಂಕ್ಷಿಪ್ತ ವಾದ ಮಂಡಿಸಿದರು. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ
ಎಸ್‌ಐಆರ್ ವಿರೋಧಿಸಿ ಇಸಿಐ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ದೀದಿ
ಭಾರತ ಚುನಾವಣಾ ಆಯೋಗ ಮತ್ತು ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಅಗರ್ವಾಲ್ ವಿರುದ್ಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ನಡೆಸುತ್ತಿರುವುದನ್ನು ವಿರೋಧಿಸಿ ಮಮತಾ ನೇತೃತ್ವದ
ಇಡಿ ಮೇಲೆ ಮಮತಾ ರೇಡ್: ದಾಳಿ ವೇಳೆ ನುಗ್ಗಿ “ಐಪ್ಯಾಕ್” ಕಡತಗಳನ್ನು ಹೊತ್ತೊಯ್ದ ದೀದಿ
ಚುನಾವಣಾ ತಂತ್ರಗಾರಿಕೆ ಸಂಸ್ಥೆ ‘ಐ ಪ್ಯಾಕ್’ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋಲ್ಕತಾದಲ್ಲಿರುವ ಐಪ್ಯಾಕ್ ಮುಖ್ಯಸ್ಥನ ಮನೆಯ ಮೇಲೆ ದಾಳಿ ನಡೆದಾಗ ಅಲ್ಲಿಗೆ ನುಗ್ಗಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದಾಖಲೆಗಳನ್ನು ಎತ್ತಿಕೊಂಡು
ವಕ್ಫ್ ತಿದ್ದುಪಡಿ ಕಾಯ್ದೆ: ಹೊತ್ತಿ ಉರಿಯುತ್ತಿರುವ ಬಂಗಾಳದಲ್ಲಿ ಮೂರು ಸಾವು
ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಆ ರಾಜ್ಯ ಹೊತ್ತಿ ಉರಿಯುತ್ತಿದೆ. ಘರ್ಷಣೆಯಲ್ಲಿ ಈವರೆಗೆ ಒಟ್ಟು ಮೂವರು ಮೃತಪಟ್ಟಿದ್ದಾರೆ. 150ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಂಸಾಚಾರ ಮುರ್ಷಿದಾಬಾದ್ ಜಿಲ್ಲೆಯ ಹಲವು
25,000 ಶಿಕ್ಷಕರನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್: ಪಶ್ಚಿಮ ಬಂಗಾಳ ಸರ್ಕಾರಕ್ಕೆ ಮುಖಭಂಗ
ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ನೇಮಕ ಮಾಡಿದ್ದ 25 ಸಾವಿರ ಶಿಕ್ಷಕರ ನೇಮಕಾತಿಯನ್ನು ರದ್ದುಗೊಳಿಸಿ ಕೋಲ್ಕತಾ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಭಾರೀ ಮುಖಭಂಗ ಉಂಟಾಗಿದೆ. ಪಶ್ಚಿಮ ಬಂಗಾಳದ ಸ್ಕೂಲ್ ಸರ್ವಿಸ್
ಆರ್‌ಜಿ ಕಾರ್ ಹತ್ಯಾಕಾಂಡ: ಮೇಲ್ಮನವಿಗೆ ಹೈಕೋರ್ಟ್ ಅಸ್ತು
ಕೋಲ್ಕತ್ತಾ: ಆರ್ಜಿ ಕಾರ್ ಆಸ್ಪತ್ರೆಯ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಸಂಜಯ್ ರಾಯ್‌ಗೆ ಆಜೀವ ಜೈಲು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಕಲ್ಕತ್ತಾ ಹೈಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಅನುಮತಿ ನೀಡಿದೆ. ಪ್ರಕರಣದ ಏಕೈಕ ಅಪರಾಧಿ ಸಂಜಯ್ ರಾಯ್ಗೆ



