woman suicide
ಚಿಕ್ಕಬಳ್ಳಾಪುರದಲ್ಲಿ ನವವಿವಾಹಿತೆ ಆತ್ಮಹತ್ಯೆ: ಸಂಬಂಧಿಕರ ಪ್ರತಿಭಟನೆ
ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿರುವ ಸಿರೀಶಾನಾವರ ಮೃತದೇಹವನ್ನು ಬಶೆಟ್ಟಿಹಳ್ಳಿ ರಸ್ತೆಯಲ್ಲಿ ಇಟ್ಟು ಸಂಬಂಧಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಶ್ರೀನಾಥ್ ಎಂಬುವರನ್ನು ಪ್ರತಿಸಿ ವಿವಾಹವಾಗಿದ್ದ ಸಿರೀಶಾ ಕ್ರಿಮಿನಾಶಕ ಮಾತ್ರೆ ತಿಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತರ ಕುಟುಂಬದವರು ದೂರು ದಾಖಲಿಸಿದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಲಾಗಿದೆ. ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಡು ರಸ್ತೆಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ನಡೆಸಿದ ಹಿನ್ನೆಲೆ ಒಂದು ಕಿ.ಮೀವರೆಗೆ ಟ್ರಾಫಿಕ್
ಗೌರಿಬಿದನೂರಿನಲ್ಲಿ ತಂದೆಯ ಸಾವಿನಿಂದ ನೊಂದ ಮಗಳೂ ಆತ್ಮಹತ್ಯೆ
ಚಿಕ್ಕಬಳ್ಳಾಪುರದ ಗೌರಿಬಿದನೂರು ನಗರದ ನಾಗಿರೆಡ್ಡಿ ಬಡಾವಣೆಯ ಯುವತಿ ಸ್ವರ್ಣ (22) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆ ಬೆಂಗಳೂರಿನ ಮಹಾರಾಣಿ ಕಾಲೇಜಿನಲ್ಲಿ ಎಂಎಸ್ಸಿ ಪದವಿ ವ್ಯಾಸಂಗ ಮಾಡುತ್ತಿದ್ದರು. ಕಾಲೇಜಿನ ಹಾಸ್ಟೆಲ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮನೆಗೆ ಬಂದಿದ್ದ ಸ್ವರ್ಣರನ್ನು ತಾಯಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ
ಪತಿ, ಮಕ್ಕಳಿದ್ದರೂ ಅಕ್ರಮ ಸಂಬಂಧ: ಪ್ರಿಯಕರನ ಜೊತೆ ತನ್ನ ಸ್ನೇಹಿತೆಯ ನೋಡಿ ಬಸವೇಶ್ವರ ನಗರದಲ್ಲಿ ಮಹಿಳೆ ಆತ್ಮಹತ್ಯೆ
ತನ್ನ ಆಪ್ತ ಸ್ನೇಹಿತೆಯೇ ತನ್ನ ಪ್ರಿಯಕರನ ಜೊತೆ ಸಂಬಂಧದಲ್ಲಿ ಇರುವುದನ್ನು ಕಂಡ ವಿವಾಹಿತ ಮಹಿಳೆಯೊಬ್ಬರು ಬೆಂಗಳೂರಿನ ಬಸವೇಶ್ವರ ನಗರದ ಕೆ ಹೆಚ್ ಬಿ ಕಾಲೊನಿಯಲ್ಲಿರುವ ಓಯೋ ಚಾಂಪಿನಿಯನ್ ಕಂಫರ್ಟ್ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆಯಾಗಿ ಇಬ್ಬರು ಮಕ್ಕಳಿರುವ ಯಶೋಧಾ (38)
ತಲಘಟ್ಟಪುರದಲ್ಲಿ ವರದಕ್ಷಿಣೆ ಕಿರುಕುಳ ಆರೋಪ: ಗೃಹಿಣಿ ಆತ್ಮಹತ್ಯೆ
ಬೆಂಗಳೂರಿನ ತಲಘಟ್ಟಪುರದ ಅವಲಹಳ್ಳಿಯಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿದೆ. ನವ್ಯಾ (28) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ನವ್ಯಾ ಮತ್ತು ಶೈಲೇಶ್ ದಂಪತಿ ನಾಲ್ಕು ವರ್ಷದ ಹಿಂದೆ ವಿವಾಹವಾಗಿದ್ದರು. ಶೈಲೇಶ್ ಸಾಫ್ಟ್ ವೇರ್ ಎಂಜಿನಿಯರ್. ನವ್ಯಾಗೆ ಪತಿ ಮತ್ತವರ
ಮೈಸೂರಿನಲ್ಲಿ ನದಿಗೆ ಹಾರಿದ ಯುವತಿ, ಹಾಸನದಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ
ಹುಣಸೂರು ತಾಲೂಕು ಲಕ್ಷ್ಮಣ ತೀರ್ಥ ನದಿ ತೂಗುಸೇತುವೆ ಬಳಿ ನೀರಿಗೆ ಜಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹರವೆ ಗ್ರಾಮದ ನಿವಾಸಿ ನಂಜುಂಡಸ್ವಾಮಿ ಮತ್ತು ಅಂಬುಜ ಪುತ್ರಿ ದೀಪಿಕಾ ಆತ್ಮಹತ್ಯೆಗೆ ಮಾಡಿಕೊಂಡ ಯುವತಿ. ಮೈಸೂರಿನ ಜಯಲಕ್ಷ್ಮಿಪುರಂ ನಲ್ಲಿರುವ ವಿಶ್ವಕವಿ ಕುವೆಂಪು ಕಾಲೇಜಿನಲ್ಲಿ ದ್ವಿತೀಯ
ರಾಜಾಜಿನಗರದಲ್ಲಿ ಪ್ರೀತಿಸಿದಾತ ಮದುವೆ ಮುಂದೂಡುತ್ತಿದ್ದನೆಂದು ನೊಂದ ಯುವತಿ ಆತ್ಮಹತ್ಯೆ
ರಾಜಾಜಿನಗರದ ಗಾಯತ್ರಿ ನಗರದಲ್ಲಿ ಪ್ರೀತಿಸುತ್ತಿದ್ದ ಯುವಕ ಮದುವೆಯನ್ನು ಮುಂದೂಡುತ್ತ ಬರುತ್ತಿದ್ದಾನೆಂದು ಜಗಳವಾಡಿದ ಯುವತಿ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಖಾಸಗಿ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದ ಲತಾ(25) ನೇಣುಬಿಗಿದುಕೊಂಡ ಯುವತಿ. ಆಕೆ ಮಂಡ್ಯ ಜಿಲ್ಲೆಯ ರಂಜಿತ್ ಎಂಬ ಯುವಕನನ್ನು ಐದು
Suicide Death- ಬಾಗಲಗುಂಟೆಯಲ್ಲಿ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಯಿಂದ ಕಿರುಕುಳ: ಪತ್ನಿ ಆತ್ಮಹತ್ಯೆ
ಬೆಂಗಳೂರು ಟಿ.ದಾಸರಹಳ್ಳಿಯ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ಪತಿಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೂಜಾಶ್ರೀ(28) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ. ಮೂರು ವರ್ಷದ ಹಿಂದೆ ಪೂಜಾಶ್ರೀ
ಗದಗದಲ್ಲಿ ಮಾಜಿ ಪ್ರೇಮಿಯಿಂದ ವೀಡಿಯೊ ವೈರಲ್ ಬೆದರಿಕೆ: ಮದುವೆ ಸಂಭ್ರಮದಲ್ಲಿದ್ದ ಯುವತಿ ಸುಸೈಡ್
ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ಮಾಜಿ ಪ್ರೇಮಿ ನಿನ್ನ ವೀಡಿಯೊ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್ ಮಾಡಿದ್ದಕ್ಕೆ ಹೆದರಿ ಮದುವೆ ಸಂಭ್ರಮದಲ್ಲಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾಯಿರಾಬಾನು ನದಾಫ್ ಆತ್ಮಹತ್ಯೆ ಮಾಡಿಕೊಂಡ ಯುವತಿ. ಸಾಯಿರಾಬಾನು ಡೆತ್‌ನೋಟ್ ಬರೆದಿಟ್ಟಿದ್ದು, ಮೈಲಾರಿ
ಬೆಟಗೇರಿಯಲ್ಲಿ ನವ ವಿವಾಹಿತೆಯ ಆತ್ಮಹತ್ಯೆ
ಗದಗ ಜಿಲ್ಲೆಯ ಬೆಟಗೇರಿ ಶರಣ ಬಸವೇಶ್ವರ ನಗರದಲ್ಲಿ ಡೆತ್‌ನೋಟ್ ಬರೆದಿಟ್ಟು ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪೂಜಾ ಅಮರೇಶ ಅಯ್ಯನಗೌಡರ್(27) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಅತ್ತೆ ಶಶಿಕಲಾ, ಬಾವ ವೀರನಗೌಡ ಹಾಗೂ ಮಾವ ನಿತ್ಯ ಕಿರುಕುಳ
ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ಬಿಬಿಎಂಪಿ ಕಚೇರಿ ಉದ್ಯೋಗಿ ಆತ್ಮಹತ್ಯೆ
ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ವಾಸವಿದ್ದ ಚಾಮರಾಜಪೇಟೆಯ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂದಿನಿ (32) ಆತ್ಮಹತ್ಯೆ ಮಾಡಿಕೊಂಡವರು. ಫೆ.23ರ ರಾತ್ರಿ ಈ ದುರಂತ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಬರುವ ಮುನ್ನವೇ ಕುಟುಂಬಸ್ಥರು