woman suicide
ನಂಜನಗೂಡು ಮಹಿಳೆ ಆತ್ಮಹತ್ಯೆ; ಮೈಕ್ರೋ ಫೈನಾನ್ಸ್ ಕಿರುಕುಳ ಶಂಕೆ
ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ವಿಷದ ಮಾತ್ರೆಗಳನ್ನು ನುಂಗಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಯಶೀಲಾ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಐಐಎಫ್‌ಎಲ್, ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್‌ನಲ್ಲಿ ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ ಜಯಶೀಲಾ 5 ಲಕ್ಷ ಸಾಲ ಪಡೆದಿದ್ದರು. ಪ್ರತಿ ತಿಂಗಳು 20,000ಕ್ಕೂ ಹೆಚ್ಚು ಇಎಂಐ ಕಟ್ಟಬೇಕಾಗಿತ್ತು. ಸಾಲದಲ್ಲಿ ತೆಗೆದುಕೊಂಡಿದ್ದ ಹಸು ಇತ್ತೀಚೆಗೆ ಮೃತಪಟ್ಟಿತ್ತು. ಈ ಕಾರಣಕ್ಕೆ ಜೀವನ ನಿರ್ವಹಣೆ ಮಾಡಲು ಸಾಧ್ಯವಾಗದ ಪರಿಸ್ಥಿತಿಗೆ ತಲುಪಿದ್ದರು ಎನ್ನಲಾಗಿದೆ.
ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಯಮನಾಪುರ ಹೊರವಲಯದಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಶಿರೂರಿನ ಸರೋಜಾ ಕಿರಬಿ(52) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೈನಾನ್ಸ್‌ನಲ್ಲಿ ಸಬ್ಸಿಡಿಗೆ 2.30 ಲಕ್ಷ ರೂ.