Yellapur
ಯಲ್ಲಾಪುರದಲ್ಲಿ ಬಸ್ ಮರಕ್ಕೆ ಡಿಕ್ಕಿ: ಬಸ್ಸಲ್ಲೇ ಸಿಲುಕಿತು ಚಾಲಕನ ಮುರಿದ ಕಾಲು
ಮುಂಬೈಯಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಚಾಲಕನ ಕಾಲು ಮುರಿದು ಬಸ್‌ನಲ್ಲೇ ಸಿಕ್ಕಿಕೊಂಡ ಘಟನೆ ಯಲ್ಲಾಪುರದ ಹಳಿಯಾಳ ಕ್ರಾಸ್ ಬಳಿ ನಡೆದಿದೆ. ಸ್ಥಳೀಯರು ಮತ್ತು ಪೊಲೀಸರು ಧಾವಿಸಿ ಚಾಲಕನನ್ನು ರಕ್ಷಣೆ ಮಾಡಿದ್ದಾರೆ, ಘಟನೆಯಲ್ಲಿ ಬಸ್‌ನಲ್ಲಿದ್ದ 20 ಕ್ಕೂ ಹೆಚ್ಚು ಪ್ರಯಾಣಿಕರಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಯಲ್ಲಾಪುರ ಆಸ್ಪತ್ರೆಯಿಂದ ಹುಬ್ಬಳ್ಳಿಗೆ ಸ್ಥಳಾಂತರಿಸಲಾಗಿದೆ. ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.
ಯಲ್ಲಾಪುರದಲ್ಲಿ ಶೀಲ ಶಂಕಿಸಿ ಬೆಂಕಿ ಹಚ್ಚಿದ ಗಂಡ: ಏಳು ದಿನ ನರಳಿ ಮೃತಪಟ್ಟ ಪತ್ನಿ
ಪತ್ನಿಯ ಶೀಲ ಶಂಕಿಸಿ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಏಳು ದಿನಗಳ ಬಳಿಕ ಆಕೆ ಮೃತಪಟ್ಟಿರುವ ಘಟನೆ ಉತ್ತರಕನ್ನಡದ ಯಲ್ಲಾಪುರ ತಾಲೂಕಿನ ಕಿರವತ್ತಿ ಬೊಂಬಡಿಕೊಪ್ಪದಲ್ಲಿ ನಡೆದಿದೆ. ಪತಿ ಬಾಬು ಎಕ್ಕು ಖಾತ್ರೋಟ ಎಂಬಾತ ಪತ್ನಿ ಜನ್ನಿ ಬಾಬು ಖಾತ್ರೋಟ
ಯಲ್ಲಾಪುರದಲ್ಲಿ ಲಾರಿ ಪಲ್ಟಿಯಾಗಿ 10 ಜನ ಸಾವು
ಉತ್ತರ ಕನ್ನಡದ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ 10 ಜನರು ಮೃತಪಟ್ಟಿದ್ದಾರೆ. ಈ ದುರಂತ ಇಂದು (ಬುಧವಾರ) ಬೆಳಗ್ಗೆ ಸಂಭವಿಸಿದೆ. 15ಕ್ಕೂ ಹೆಚ್ಚು ಜನರಿಗೆ ಗಂಭೀರ




