zameer ahmed
ಬೌದ್ಧಿಕ ದಿವಾಳಿ ಯಾಗಿರುವ ಬಿಜೆಪಿ: ಜಮೀರ್ ಅಹಮದ್ ಖಾನ್ ಆಕ್ರೋಶ
ಬೆಂಗಳೂರು : ಗುಂಪುಗಾರಿಕೆ ಹಾಗೂ ಆಂತರಿಕ ಕಚ್ಚಾಟದಿಂದ ಕೆಂಗೆಟ್ಟು ಬೌದ್ಧಿಕವಾಗಿ ದಿವಾಳಿಯಾಗಿರುವ ಬಿಜೆಪಿಯು ರಾಜ್ಯದ ಜನಪರ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡಲು ಹೊರಟಿರುವುದು ಹಾಸ್ಯಾಸ್ಪದ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಎಂದೂ ಜನರಿಂದ ಬಹುಮತ ಪಡೆಯದ ಬಿಜೆಪಿ ವಾಮ ಮಾರ್ಗದ ಮೂಲಕ ಅಧಿಕಾರ ಹಿಡಿದು ಹತ್ತಾರು ಹಗರಣ ಮಾಡಿ 40 ಪರ್ಸೆಂಟ್