Wednesday, December 24, 2025
Menu

ಆನ್‌ಲೈನ್‌ ವೇಶ್ಯಾವಾಟಿಕೆ ಸುಲಿಗೆ ಬಲೆಗೆ ಟೆಕ್ಕಿ: ಯುವತಿಯರಿಬ್ಬರು ಸೇರಿ ಐವರ ಬಂಧನ

ಆನ್‌ಲೈನ್‌ನಲ್ಲಿ ವೇಶ್ಯಾವಾಟಿಕೆ ಸುಲಿಗೆ ಬಲೆಗೆ ಟೆಕ್ಕಿಯೊಬ್ಬ ಸಿಲುಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಆರ್‌ಆರ್ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ, ಮೋಹದ ಬಲೆಗೆ ಬೀಳಿಸಿ ಸುಲಿಗೆ ಮಾಡುತ್ತಿದ್ದ ಗ್ಯಾಂಗ್‌ನ ಇಬ್ಬರು ಯುವತಿಯರು ಸೇರಿ ಐವರನ್ನು ಬಂಧಿಸಿದ್ದಾರೆ.

ʼಬಂಧಿತರನ್ನು ಸುಮಲತಾ ಅಲಿಯಾಸ್ ಅಂಜಲಿ, ಹರ್ಷಿಣಿ ಅಲಿಯಾಸ್ ಸ್ವೀಟಿ, ಜಗದೀಶ್, ಮಂಜುನಾಥ್ ಮತ್ತು ಲೋಕೇಶ್ ಎಂದು ಗುರುತಿಸಲಾಗಿದೆ. ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬರು ನೀಡಿದ ದೂರಿನ ಅನ್ವಯ ತನಿಖೆ ನಡೆಸಿದ ಪೊಲೀಸರು ವಂಚಕರನ್ನು ಸೆರೆ ಹಿಡಿದಿದ್ದಾರೆ.

ಆರೋಪಿಗಳು ಟೆಲಿಗ್ರಾಂ ಮೂಲಕ ಯುವಕರನ್ನು ಸಂಪರ್ಕಿಸಿ ಆನ್‌ಲೈನ್‌ನಲ್ಲಿ ಹುಡುಗಿಯರನ್ನು ಬುಕ್ ಮಾಡುವಂತೆ ಪ್ರೇರೇಪಿಸಿ ಸುಲಿಗೆ ನಡೆಸುತ್ತಿದ್ದರು. ಡಿಸೆಂಬರ್ 1ರಂದು ಟೆಲಿಗ್ರಾಂ ಗ್ರೂಪ್ ಮೂಲಕ ಹುಡುಗಿಯನ್ನು ಬುಕ್ ಮಾಡಿದ್ದ ಯುವಕ, ಆಕೆ ನೀಡಿದ ವಿಳಾಸಕ್ಕೆ ತೆರಳಿದ್ದ. ಅಲ್ಲಿ ಬಟ್ಟೆ ಬಿಚ್ಚುತ್ತಿದ್ದಂತೆಯೇ 20 ಸಾವಿರ ನಗದು ಮತ್ತು ಮೊಬೈಲ್‌ ಕಿತ್ತುಕೊಂಡು, ಬಳಿಕ ಒಂದು ಲಕ್ಷ ರೂ. ಕೊಡು, ಇಲ್ಲವಾದರೆ ನಮ್ಮ ಕಡೆಯವರನ್ನು ಕರೆಸುತ್ತೇನೆ ಎಂದು ಬೆದರಿಕೆ ಹಾಕಿದ್ದಾಳೆ. ಯುವಕ ಮೊಬೈಲ್ ವಾಪಸ್ ಪಡೆದು ಅಲ್ಲಿಂದ ಪರಾರಿಯಾಗಿದ್ದ.

ಡಿಸೆಂಬರ್ 20ರಂದು ಮತ್ತೆ ಟೆಲಿಗ್ರಾಂ ಮೂಲಕ ಮತ್ತೊಬ್ಬ ಹುಡುಗಿಯನ್ನು ಯುವಕ ಬುಕ್ ಮಾಡಿದ್ದ. ಆರ್‌ಆರ್ ನಗರದಲ್ಲಿರುವ ಸ್ಥಳಕ್ಕೆ ತೆರಳಿದ್ದ. ಅಲ್ಲಿ ಹಳೆಯ ಹುಡುಗಿ, ಹೊಸ ಹುಡುಗಿ ಹಾಗೂ ಮೂವರು ಯುವಕರು ಯುವಕನ ಮೇಲೆ ಹಲ್ಲೆ ನಡೆಸಿ 20 ಸಾವಿರ ರೂ. ಕಸಿದುಕೊಂಡಿದ್ದಾರೆ. ಒಂದು ಲಕ್ಷ ರೂ. ನೀಡುವಂತೆ ಬೆದರಿಕೆ ಹಾಕಿ ಕಾರಿನಲ್ಲಿ ಕಿಡ್ನ್ಯಾಪ್ ಮಾಡಲು ಯತ್ನಿಸಿ ದ್ದಾರೆ. ಯುವಕ ಕೂಗಿಕೊಂಡಾಗ ಸ್ಥಳೀಯರು ತಕ್ಷಣ 112ಗೆ ಕರೆ ಮಾಡಿದ್ದು, ಸ್ಥಳಕ್ಕೆ ಬಂದ 112 ಪೊಲೀಸ್ ಹಾಗೂ ಸಾರ್ವಜನಿಕರು ಯುವಕನನ್ನು ರಕ್ಷಿಸಿದ್ದಾರೆ. ಆರ್‌ಆರ್ ನಗರ ಪೊಲೀಸರು ಆರೋಪಿಗಳನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Related Posts

Leave a Reply

Your email address will not be published. Required fields are marked *